Home ಕ್ರೈಂ ನ್ಯೂಸ್ ಬಂಡಾಯದ ಬಿಸಿ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸುಭಾನ್ ಸಾಬ್ 6 ವರ್ಷ ಉಚ್ಚಾಟನೆ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಬಂಡಾಯದ ಬಿಸಿ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸುಭಾನ್ ಸಾಬ್ 6 ವರ್ಷ ಉಚ್ಚಾಟನೆ!

Share
ದಾವಣಗೆರೆ
Share

ಬೆಂಗಳೂರು/ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಹೆಚ್. ಸುಭಾನ್ ಸಾಬ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಉಚ್ಚಾಟನೆಗೆ ಕಾರಣಗಳೇನು?

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವೇ ಸುಭಾನ್ ಸಾಬ್ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಪಕ್ಷದ ಹಿರಿಯ ನಾಯಕರ ವಿರುದ್ಧ ಅವಹೇಳನಕಾರಿ ಶಬ್ದಗಳನ್ನು ಬಳಸಿ ಹೇಳಿಕೆ ನೀಡಿದ್ದರು. ಈ ನಡವಳಿಕೆಯು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ (ಆಡಳಿತ) ಜಿ.ಸಿ. ಚಂದ್ರಶೇಖರ್ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದ ಜಾರಿಗೆ:

ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಕಿತ್ತೊಗೆಯಲಾಗಿದ್ದು, ಮುಂದಿನ 6 ವರ್ಷಗಳ ಕಾಲ ಅವರು ಕಾಂಗ್ರೆಸ್ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಉಪಚುನಾವಣೆ ಹೊತ್ತಲ್ಲೇ ಈ ಬೆಳವಣಿಗೆಯಾಗಿರುವುದು ಜಿಲ್ಲಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

Share

Leave a comment

Leave a Reply

Your email address will not be published. Required fields are marked *