Home ದಾವಣಗೆರೆ ನ್ಯಾಮತಿ ತಾಲೂಕಿನಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ: ಚರಂಡಿ ವ್ಯವಸ್ಥೆ ಇಲ್ಲದೆ ಮನೆಗಳಿಗೆ ನುಗ್ಗಿದ ಕೊಳಚೆ ನೀರು!
ದಾವಣಗೆರೆಬೆಂಗಳೂರು

ನ್ಯಾಮತಿ ತಾಲೂಕಿನಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ: ಚರಂಡಿ ವ್ಯವಸ್ಥೆ ಇಲ್ಲದೆ ಮನೆಗಳಿಗೆ ನುಗ್ಗಿದ ಕೊಳಚೆ ನೀರು!

Share
ನ್ಯಾಮತಿ
Share

ದಾವಣಗೆರೆ: ನ್ಯಾಮತಿ ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆರ್ಭಟಿಸಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪಟ್ಟಣದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಯ ವಿವರ:

ಶನಿವಾರ ಸಂಜೆ 5.30ರ ಸುಮಾರಿಗೆ ಬಿಸಿಲು ಇರುವಾಗಲೇ ಆರಂಭವಾದ ಮಳೆ, ನಂತರ ಆರ್ಭಟಿಸಿತು. ಸವಳಂಗ, ಕೆಂಚಿಕೊಪ್ಪ, ಬೆಳಗುತ್ತಿ, ಗೋವಿನಕೋವಿ ಹಾಗೂ ಚೀಲೂರು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ದ್ವಿಚಕ್ರ ವಾಹನ ಸವಾರರು ದಿಢೀರ್ ಮಳೆಗೆ ಸಿಲುಕಿ ಹೈರಾಣಾದರು.

ಸಾರ್ವಜನಿಕರ ಸಂಕಷ್ಟ:

ಪಟ್ಟಣದ ಶಿವಾನಂದಪ್ಪ ಬಡಾವಣೆಯ ದೇವರಾಜ್ ಅರಸು ಹಾಸ್ಟೆಲ್ ಪಕ್ಕದ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ನೇರವಾಗಿ ಮನೆಗಳ ಒಳಗೆ ನುಗ್ಗುತ್ತಿದ್ದು, ತ್ಯಾಜ್ಯ ವಸ್ತುಗಳಿಂದಾಗಿ ದುರ್ವಾಸನೆ ಹರಡಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳಾದ ಅವಿನಾಶ್, ಪುಷ್ವಾವತಿ ಹಾಗೂ ಎನ್.ಆರ್. ಬಾಲರಾಜ್ ಆಕ್ರೋಶ ಹೊರಹಾಕಿದ್ದಾರೆ.

Share

Leave a comment

Leave a Reply

Your email address will not be published. Required fields are marked *