ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಪ್ರಚಾರಕ್ಕೆ ಸಚಿವ ಜಮೀರ್ ಅಹ್ಮದ್ ಅವರು ಬರುತ್ತಾರಾ ಇಲ್ಲವೋ ಎಂಬ ಸಸ್ಪೆನ್ಸ್ ಉಳಿದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು. “ಪಕ್ಷ ಜಮೀರ್ ಅವರಿಗೆ ಕೇರಳ ಚುನಾವಣೆ ಪ್ರಚಾರದ ಜವಾಬ್ದಾರಿ ನೀಡಿದ್ದು, ಅದನ್ನು ಮುಗಿಸಿಕೊಳ್ಳುತ್ತಾರೆ. ಇನ್ನುಳಿದ ಅಲ್ಪಸಂಖ್ಯಾತ ನಾಯಕರಿಗೂ ನಾವು ಚುನಾವಣಾ ಪ್ರಚಾರದ ಜವಾಬ್ದಾರಿ ವಹಿಸಿದ್ದೇವೆ”ಎಂದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಅವರಿಗೆ ಅಸಮಾಧಾನವಿದೆ ಎಂದು ಕೇಳಿದಾಗ, “ಒಬ್ಬ ವ್ಯಕ್ತಿ ಮೇಲೆ ಪಕ್ಷ ನಡೆಯುವುದಿಲ್ಲ. ಡಿ.ಕೆ. ಶಿವಕುಮಾರ್ ಮೇಲೂ ನಡೆಯುವುದಿಲ್ಲ, ಸಿದ್ದರಾಮಯ್ಯ ಅವರ ಮೇಲೂ ನಡೆಯುವುದಿಲ್ಲ, ಜಮೀರ್ ಅವರ ಮೇಲೂ ನಡೆಯುವುದಿಲ್ಲ. ಪಕ್ಷವು ಸಿದ್ಧಾಂತ ಹಾಗೂ ಕಾರ್ಯಕರ್ತರ ಮೇಲೆ ನಡೆಯುತ್ತದೆ. ಚುನಾವಣೆಯಲ್ಲಿ ನಾವು ಮೊದಲಿನಿಂದಲೂ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದರು.
ಅಲ್ಪಸಂಖ್ಯಾತರಿಗೆ ನಾವು ಕೊಟ್ಟಿರುವ ಕೊಡುಗೆಯನ್ನು ಬಿಜೆಪಿಯವರು ಮುಸ್ಲಿಂ ಓಲೈಕೆ ಎಂದು ಟೀಕೆ ಮಾಡುತ್ತಿದೆ. ಇದು ಮುಸಲ್ಮಾನರ ಪಕ್ಷ ಎಂದು ಅವರು ಟೀಕೆ ಮಾಡುತ್ತಾರೆ. ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದಲೇ ನಾವು ಈ ಭಾಗದ ಜಬ್ಬಾರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡಿದ್ದೇವೆ. ಶಿಗ್ಗಾಂವ್ ಕ್ಷೇತ್ರದವರಿಗೂ ಸ್ಥಾನ ನೀಡಿದ್ದು, 16 ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಲಾಗಿದೆ” ಎಂದು ವಿವರಿಸಿದರು.
- Congress Campaigning
- DAVANAGERE NEWS
- Davanagere South Byelection
- Davanagere South Constituency.
- DK Shivakumar
- DK Shivakumar Press Meet
- Karnataka Government
- Karnataka Politics
- Minority Leaders
- Siddaramaiah
- Zameer Ahmed Khan
- ಅಲ್ಪಸಂಖ್ಯಾತ ನಾಯಕರು
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಪ್ರಚಾರ
- ಜಮೀರ್ ಅಹ್ಮದ್ ಖಾನ್
- ಡಿ. ಕೆ. ಶಿವಕುಮಾರ್
- ದಾವಣಗೆರೆ ಜಿಲ್ಲಾ ಸುದ್ದಿ
- ದಾವಣಗೆರೆ ದಕ್ಷಿಣ ಉಪಚುನಾವಣೆ
- ಬಿಜೆಪಿ ಟೀಕೆ
- ಸಿದ್ದರಾಮಯ್ಯ





Leave a comment