Home ದಾವಣಗೆರೆ ಕಾಂಗ್ರೆಸ್ ನ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣ: ಡಾ. ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆಬೆಂಗಳೂರು

ಕಾಂಗ್ರೆಸ್ ನ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣ: ಡಾ. ಪ್ರಭಾ ಮಲ್ಲಿಕಾರ್ಜುನ್

Share
ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ: ಮಹಿಳೆಯರು, ಹಿರಿಯ ನಾಗರೀಕರು ಮತ್ತು ಯುವಕರನ್ನು ಗಮನದಲ್ಲಿಟ್ಟುಕೊಂಡು ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಮೂಲಕ ಸರ್ವರಿಗೂ ನ್ಯಾಯ ಒದಗಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಸಾಪುರ, ಬಸವರಾಜಪೇಟೆ ಸೇರಿದಂತೆ ಸುತ್ತಮುತ್ತಲ ಗ್ರಾಮದ ಮನೆಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಬೆಂಬಲ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನಂತರ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜಾತಿ, ಧರ್ಮ, ಪ್ರದೇಶಗಳ ಬೇಧವಿಲ್ಲದೆ ಎಲ್ಲ ವರ್ಗದ ಜನರಿಗಾಗಿ ರೂಪಿಸಲ್ಪಟ್ಟಿವೆ ಎಂದರು.

ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಿರುವುದರಿಂದ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ದೊರಕುತ್ತಿದೆ. ದಕ್ಷಿಣ ಕ್ಷೇತ್ರದಲ್ಲಿ ರಸ್ತೆ, ಪಾದಚಾರಿ ಮಾರ್ಗಗಳು ಮತ್ತು ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಈ ವೇಳೆ ಮಹಿಳೆಯರು, ಮುಖಂಡರು, ಕಾರ್ಯಕರ್ತರು ಇದ್ದರು.

Share

Leave a comment

Leave a Reply

Your email address will not be published. Required fields are marked *