ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ನಿಯೋಜಿತರಾಗಿರುವ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ಯಾವುದೇ ಕಾರಣಕ್ಕೂ ಮೈಮರೆಯಬೇಡಿ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರೆ ನೀಡಿದರು.
ನಗರದ ಬಾಪೂಜಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಹಿಂದ ನಾಯಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗುತ್ತಾ ಬಂದಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನ ತಲುಪಿದೆ. ಈ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಿದ್ದು, ಜನರಿಗೆ ತಿಳಿಸುವ ಕೆಲಸ ಮಾಡಿ. ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಗೆದ್ದು ಸರ್ಕಾರದ ಜನಪ್ರಿಯತೆ ಮತ್ತಷ್ಟು ಹೆಚ್ಚಿಸಿ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ತನ್ವೀರ್ ಸೇಠ್, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್, ಕೆಪಿಸಿಸಿ
ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆ.ಹೆಚ್. ಮುನಿಯಪ್ಪ, ಚೆಲುವರಾಯ ಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕರಾದ ಸಲೀಂ ಅಹ್ಮದ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.
- Bagalkot Byelection
- Congress AHINDA Meeting
- Congress Guarantee Schemes
- Davanagere Byelection
- Davanagere South Constituency.
- DK Shivakumar
- Election 2026.
- Karnataka Politics
- KPCC Campaign
- Randeep Surjewala
- SS Mallikarjun
- ಎಸ್. ಎಸ್. ಮಲ್ಲಿಕಾರ್ಜುನ್
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಅಹಿಂದ ಸಭೆ
- ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು
- ಕೆಪಿಸಿಸಿ ಪ್ರಚಾರ ಸಭೆ
- ಚುನಾವಣೆ 2026
- ಡಿ. ಕೆ. ಶಿವಕುಮಾರ್
- ದಾವಣಗೆರೆ ಉಪಚುನಾವಣೆ
- ದಾವಣಗೆರೆ ದಕ್ಷಿಣ ಕ್ಷೇತ್ರ ಅನುದಾನ
- ಬಾಗಲಕೋಟೆ ಉಪಚುನಾವಣೆ
- ರಣದೀಪ್ ಸುರ್ಜೇವಾಲ





Leave a comment