• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಎಲ್ಲಾ ಎಸ್ ಟಿ ವಸತಿ ಶಾಲೆಗಳು, ರಾಯಚೂರು ವಿವಿಗೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Editor by Editor
October 17, 2024
in ಬೆಂಗಳೂರು
0
ಎಲ್ಲಾ ಎಸ್ ಟಿ ವಸತಿ ಶಾಲೆಗಳು, ರಾಯಚೂರು ವಿವಿಗೆ ವಾಲ್ಮೀಕಿ ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

SUDDIKSHANA KANNADA NEWS/ DAVANAGERE/ DATE:17-10-2024

ಬೆಂಗಳೂರು: ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದರು.

ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು. ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು.

ರಾಮನ‌ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.

SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.

ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/ TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ ಎಂದು ಸಿಎಂ ಪ್ರಶ್ನಿಸಿದರು.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

 

Next Post
ಬಿಜೆಪಿ ಸುಳ್ಳುಗಳಿಗೆ ತಲೆಕೊಟ್ಟು ಮೋಸ ಹೋಗ್ಬೇಡಿ, ಸರಿಯಾದ ಉತ್ತರ ಕೊಡಿ: ಸಿಎಂ ಸಿದ್ದರಾಮಯ್ಯ ಸಿಡಿನುಡಿ

ಬಿಜೆಪಿ ಸುಳ್ಳುಗಳಿಗೆ ತಲೆಕೊಟ್ಟು ಮೋಸ ಹೋಗ್ಬೇಡಿ, ಸರಿಯಾದ ಉತ್ತರ ಕೊಡಿ: ಸಿಎಂ ಸಿದ್ದರಾಮಯ್ಯ ಸಿಡಿನುಡಿ

Leave a Reply Cancel reply

Your email address will not be published. Required fields are marked *

Recent Posts

  • ಜಾರಿ ನಿರ್ದೇಶನಾಲಯ(ED)ವು ಎಲ್ಲಾ ಮಿತಿಗಳನ್ನು ದಾಟುತ್ತಿದೆ: ಸುಪ್ರೀಂಕೋರ್ಟ್ ಗರಂ!
  • ಕೇರಳದಲ್ಲಿ 182 ಕೋವಿಡ್ -19 ಕೇಸ್: ಭಾರತಕ್ಕೆ ಕಂಟಕವಾಗುತ್ತಾ ಮಹಾಮಾರಿ?
  • “ಸಿಂಧೂರ ಅಳಿಸ ಹೊರಟವರು ಮಣ್ಣಲ್ಲಿ ಹೂತು ಹೋಗಿದ್ದಾರೆ”: ನರೇಂದ್ರ ಮೋದಿ ಗುಡುಗು!
  • “ನನ್ನ ರಕ್ತನಾಳಗಳಲ್ಲಿ ಹರಿಯುತ್ತಿರುವುದು ರಕ್ತವಲ್ಲ ಸಿಂಧೂರ”: ನರೇಂದ್ರ ಮೋದಿ ಖಡಕ್ ಮಾತು!
  • ಪಾಕ್ ನಾಯಕತ್ವ, ಸೇನಾ ಮುಖ್ಯಸ್ಥರು ತೀವ್ರ ಧಾರ್ಮಿಕ ದೃಷ್ಟಿಕೋನದ ನಡವಳಿಕೆ: ಎಸ್. ಜೈಶಂಕರ್ ಗಂಭೀರ ಆಪಾದನೆ

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In