Home ದಾವಣಗೆರೆ ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಶಾಮನೂರು ಗೆಲುವಿಗೆ ಸುರ್ಜೇವಾಲಾ, ಡಿ.ಕೆ.ಶಿ ತಂತ್ರ; ಖಾಲಿದ್ ಅಹ್ಮದ್ ಸೇರಿ ಮುಸ್ಲಿಂ ಮುಖಂಡರ ಜೊತೆ ಮಹತ್ವದ ಸಭೆ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಶಾಮನೂರು ಗೆಲುವಿಗೆ ಸುರ್ಜೇವಾಲಾ, ಡಿ.ಕೆ.ಶಿ ತಂತ್ರ; ಖಾಲಿದ್ ಅಹ್ಮದ್ ಸೇರಿ ಮುಸ್ಲಿಂ ಮುಖಂಡರ ಜೊತೆ ಮಹತ್ವದ ಸಭೆ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಪ್ರಚಾರ ನಡೆಸಲು ಕಾಂಗ್ರೆಸ್‌ನ ಹಿರಿಯ ನಾಯಕರು ದಾವಣಗೆರೆಯಲ್ಲಿ ಸಭೆ ನಡೆಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿ, ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚಿಸಿದರು. ಅಭ್ಯರ್ಥಿಗೆ ಮಾರ್ಗದರ್ಶನ ನೀಡಿದ ನಾಯಕರು, ಕ್ಷೇತ್ರದ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವಂತೆ ಕರೆ ನೀಡಿದರು.

ಈ ವೇಳೆ ಮಾತನಾಡಿದ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಪಕ್ಷದ ನಾಯಕರಾದ ರಣದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಚುನಾವಣಾ ಪ್ರಚಾರ ನಡೆಸಲಾಗುವುದು. ಮುಸ್ಲಿಂ ಸಮುದಾಯದ ಮತದಾರರ ಮನವೊಲಿಸಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸುವಂತೆ ಮತಯಾಚನೆ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಎಲ್ಲಾ ಸಮುದಾಯ, ಜಾತಿ, ಧರ್ಮದವರಿಗೂ ಫಲ ಸಿಕ್ಕಿದೆ. ಪ್ರತಿಯೊಬ್ಬರೂ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ ಇದೆ. ಸಿಎಂ ಸಿದ್ದರಾಮಯ್ಯರ ಆಡಳಿತ ಜನಪ್ರಿಯವಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಜನರ ಪ್ರೀತಿ ಸಂಪಾದಿಸಿದೆಯಲ್ಲದೇ, ವಿಶ್ವಾಸವನ್ನೂ ಗಳಿಸಿದೆ. ಶಿಗ್ಗಾಂವ, ಚನ್ನಪಟ್ಟಣ, ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿತ್ತು. ಅದೇ ರೀತಿಯಲ್ಲಿ ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶಾಮನೂರು ಶಿವಶಂಕರಪ್ಪರು ನಾಲ್ಕು ಬಾರಿ ಶಾಸಕರಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಇಂದಿಗೂ ಜನರ ಮನಸ್ಸಿನಲ್ಲಿಯೇ
ಉಳಿದಿವೆ. ಹಾಗಾಗಿ ಈ ಅಂಶಗಳು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಎನ್.ಎ. ಹ್ಯಾರಿಸ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲ್ಪಾಡ್ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಉಪಸ್ಥಿತರಿದ್ದರು.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಈ ಸ್ಥಾನವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ವಿಶೇಷ ಆಸಕ್ತಿ ವಹಿಸಿದ್ದು, ಇಂದಿನ ನಾಯಕರ ಭೇಟಿ ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿದೆ.

Share

Leave a comment

Leave a Reply

Your email address will not be published. Required fields are marked *