SUDDIKSHANA KANNADA NEWS/ DAVANAGERE/ DATE:17-08-2023
ದಾವಣಗೆರೆ: ಅಪ್ರಾಪ್ತ ಬಾಲಕನೊಬ್ಬ ಬೈಕ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ. ಆತನಿಂದ ಎರಡು ಬೈಕ್ ಗಳನ್ನು ಪೊಲೀಸರು (Police) ವಶಪಡಿಸಿಕೊಂಡ ಘಟನೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ಅಪ್ರಾಪ್ತ ಬಂಧನವಾಗಿದ್ದು, ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವ ಕಾರಣಕ್ಕೆ ಬಾಲಕನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಬಿಡಲಾಗಿದೆ.
ಈ ಸುದ್ದಿಯನ್ನೂ ಓದಿ:
Intelligence Dog : ಒಸಮಾ ಬಿನ್ ಲಾಡೆನ್ ಸಂಹಾರಕ್ಕೆ ಬಳಸಿದ್ದ ಶ್ವಾನ ದಾವಣಗೆರೆಯಲ್ಲಿ: ಅಪರಾಧಿಗಳಿಗೆ ನಡುಕ ಹುಟ್ಟಿಸಿರೋ ಚಾಣಾಕ್ಷ ಡಾಗ್ ಗೆ ಟ್ರೈನಿಂಗ್ ಹೇಗಿರುತ್ತೆ, ಆಹಾರ ಏನು, ಆಯಸ್ಸು ಎಷ್ಟು..? ಕುತೂಹಲಕಾರಿ ಸ್ಟೋರಿ ಇದು
ಈ ಪ್ರಕರಣದಲ್ಲಿ ಆರೋಪಿತರ ಪತ್ತೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ ಹಾಗೂ ಚನ್ನಗಿರಿ ಉಪವಿಭಾಗದ ಪೊಲೀಸ್ (Police) ಅಧೀಕ್ಷಕ ಡಾ.ಸಂತೋಷ್ ಕೆ.ಎಂ. ಮಾರ್ಗದರ್ಶನದಲ್ಲಿ ಸಂತೆಬೆನ್ನೂರು ಸಿಪಿಐ ಲಿಂಗನಗೌಡ ನೆಗಳೂರು, ಬಸವಾಪಟ್ಟಣದ ಪಿಎಸ್ ಐಗಳಾದ ಹೆಚ್. ಕೆ. ವೀಣಾ, ಭಾರತಿ ಅವರು ತನಿಖೆ ಕೈಗೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಂದ 50 ಸಾವಿರ ರೂಪಾಯಿ ಮೌಲ್ಯದ 2 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.