SUDDIKSHANA KANNADA NEWS/ DAVANAGERE/ DATE:21-10-2024
ನವದೆಹಲಿ: ಮುಂದಿನ ಆದೇಶದವರೆಗೆ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳ ವಿರುದ್ಧದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು ಮತ್ತು ಈ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ ಎಂದು ಹೇಳಿದೆ.
ನಿಮಗೆ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಉತ್ತಮ ಶಾಲೆಗಳನ್ನು ತೆರೆಯಿರಿ ಎಂದು ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.