Home ದಾವಣಗೆರೆ BIG NEWS: ದಾವಣಗೆರೆ ಕಾಂಗ್ರೆಸ್ ಹಿರಿಯ ಮುಖಂಡ, ಮಿಲ್ಲತ್ ಸಂಸ್ಥೆಗಳ ಸಂಸ್ಥಾಪಕ ಕೆರೆಕಟ್ಟೆ ಸೈಯದ್ ಸೈಫುಲ್ಲಾ ವಿಧಿವಶ
ದಾವಣಗೆರೆಬೆಂಗಳೂರು

BIG NEWS: ದಾವಣಗೆರೆ ಕಾಂಗ್ರೆಸ್ ಹಿರಿಯ ಮುಖಂಡ, ಮಿಲ್ಲತ್ ಸಂಸ್ಥೆಗಳ ಸಂಸ್ಥಾಪಕ ಕೆರೆಕಟ್ಟೆ ಸೈಯದ್ ಸೈಫುಲ್ಲಾ ವಿಧಿವಶ

Share
ದಾವಣಗೆರೆ
Share

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ ವಿಧಿವಶರಾಗಿದ್ದಾರೆ.

ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಜನಾಬ್ ಸೈಯದ್ ಸೈಫುಲ್ಲ ಸಾಬ್ ರವರು ಇಂದು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.

2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು.

ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.

Share

Leave a comment

Leave a Reply

Your email address will not be published. Required fields are marked *