SUDDIKSHANA KANNADA NEWS/ DAVANAGERE/ DATE:26-10-2024
ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರವು ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಖಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ವಿತರಣೆಯ ಮೇಲಿನ ನಿಷೇಧವನ್ನು ನವೆಂಬರ್ 7 ರಿಂದ ಮತ್ತೊಂದು ವರ್ಷಕ್ಕೆ ವಿಸ್ತರಿಸಿದೆ. ಈ ಮೂಲಕ ಅಡಿಕೆ ಧಾರಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಗುಟ್ಕಾ, ಮಸಾಲ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ವಿತರಣೆ ಮೇಲಿನ ನಿಷೇಧ ಹಿಂಪಡೆದಿದ್ದರೆ ಅಡಿಕೆ ಧಾರಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇತ್ತು. ಆದ್ರೆ, ಈ ನಿರ್ಧಾರದಿಂದ ಅಡಿಕೆ ಧಾರಣೆ ಯಥಾಸ್ಥಿತಿ ಮುಂದುವರಿಯಲಿದೆ.
ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದ ಆರೋಗ್ಯ ಇಲಾಖೆ ಅಕ್ಟೋಬರ್ 24 ರಂದು ನೋಟಿಸ್ ಜಾರಿ ಮಾಡಿದ್ದು, ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ನಿಷೇಧದ ಹಿಂದಿನ ಕಾರಣವೆಂದು ಉಲ್ಲೇಖಿಸಿದೆ.
ನೋಟೀಸ್ ಪ್ರಕಾರ, “ರಾಜ್ಯದ ಆಹಾರ ಸುರಕ್ಷತೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಸೆಕ್ಷನ್ 30 ರ ಅಡಿಯಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಯಾವುದೇ ಆಹಾರ ಪದಾರ್ಥದ ತಯಾರಿಕೆ, ಸಂಗ್ರಹಣೆ, ವಿತರಣೆ ಅಥವಾ ಮಾರಾಟವನ್ನು ನಿಷೇಧಿಸುವ ಅಧಿಕಾರವನ್ನು ಹೊಂದಿದ್ದಾರೆ. ಇಡೀ ರಾಜ್ಯದಲ್ಲಿ, ಒಂದು ವರ್ಷದ ಅವಧಿಗೆ ವಿಸ್ತರಿಸಿ ಆದೇಶಿಸಿದೆ.
ರಾಜ್ಯ ಆರೋಗ್ಯ ಇಲಾಖೆಯ ಈ ನಿರ್ಧಾರವು 2011 ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳ ವಿವಿಧ ನಿಬಂಧನೆಗಳೊಂದಿಗೆ ಹೊಂದಿಕೆಯಾಗುತ್ತದೆ, ಇದು ಹಾನಿಕಾರಕ ವಸ್ತುಗಳ ಮಾರಾಟವನ್ನು ನಿರ್ಬಂಧಿಸುತ್ತದೆ.