Home ಕ್ರೈಂ ನ್ಯೂಸ್ ವೈಟ್ ಹೌಸ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ವೇಳೆ ಡೊನಾಲ್ಡ್ ಟ್ರಂಪ್ ಜಸ್ಟ್ ಮಿಸ್: ಭದ್ರತಾ ಸಿಬ್ಬಂದಿಗೆ ಗುಂಡೇಟು, ಅಮೆರಿಕ ಅಧ್ಯಕ್ಷರು ಹೇಳಿದ್ದೇನು?
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ವೈಟ್ ಹೌಸ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ವೇಳೆ ಡೊನಾಲ್ಡ್ ಟ್ರಂಪ್ ಜಸ್ಟ್ ಮಿಸ್: ಭದ್ರತಾ ಸಿಬ್ಬಂದಿಗೆ ಗುಂಡೇಟು, ಅಮೆರಿಕ ಅಧ್ಯಕ್ಷರು ಹೇಳಿದ್ದೇನು?

Share
ಡೊನಾಲ್ಡ್ ಟ್ರಂಪ್
Share

ವಾಷಿಂಗ್ಟನ್: ಶನಿವಾರ ರಾತ್ರಿ ವಾಷಿಂಗ್ಟನ್ ಹಿಲ್ಟನ್‌ನಲ್ಲಿ ನಡೆದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಅಸೋಸಿಯೇಷನ್ ಔತಣಕೂಟದ ವೇಳೆ ಭೀಕರ ಗುಂಡಿನ ದಾಳಿ ನಡೆದಿದೆ. ಭಾರಿ ಶಸ್ತ್ರಾಸ್ತ್ರಗಳೊಂದಿಗೆ ಬಂದ ದಾಳಿಕೋರನೊಬ್ಬ ಭದ್ರತಾ ತಪಾಸಣಾ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಏನಾಯಿತು?:

ಕಾರ್ಯಕ್ರಮದ ವೇಳೆ ಕ್ಯಾಲಿಫೋರ್ನಿಯಾ ಮೂಲದ 31 ವರ್ಷದ ಕೋಲ್ ಟೋಮಸ್ ಅಲೆನ್ ಎಂಬಾತ ಭದ್ರತಾ ವಲಯಕ್ಕೆ ನುಗ್ಗಿ ಸೀಕ್ರೆಟ್ ಸರ್ವಿಸ್ ಏಜೆಂಟ್ ಮೇಲೆ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್, ಬುಲೆಟ್ ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಏಜೆಂಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದರು.

ಒಂಟಿ ಹಂತಕನ ಕೃತ್ಯ?:

ಈ ಕುರಿತು ಪ್ರತಿಕ್ರಿಯಿಸಿರುವ ಡೊನಾಲ್ಡ್ ಟ್ರಂಪ್, “ಇದೊಂದು ಒಂಟಿ ಹಂತಕನ ಕೃತ್ಯವಿರಬಹುದು ಎಂದು ನಾವು ಭಾವಿಸುತ್ತೇವೆ. ಸೀಕ್ರೆಟ್ ಸರ್ವಿಸ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ,” ಎಂದು ತಿಳಿಸಿದ್ದಾರೆ. ಎಫ್‌ಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಘಟನೆಯ ಹಿನ್ನೆಲೆಯಲ್ಲಿ ಔತಣಕೂಟವನ್ನು ರದ್ದುಗೊಳಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *