Home ಕ್ರೈಂ ನ್ಯೂಸ್ ಡೊನಾಲ್ಡ್ ಟ್ರಂಪ್ ಹತ್ಯೆಗೆ ಮತ್ತೆ ಸಂಚು? ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕ್ಯಾಲಿಫೋರ್ನಿಯಾ ಮೂಲದ ಶೂಟರ್ ಬಂಧನ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಡೊನಾಲ್ಡ್ ಟ್ರಂಪ್ ಹತ್ಯೆಗೆ ಮತ್ತೆ ಸಂಚು? ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕ್ಯಾಲಿಫೋರ್ನಿಯಾ ಮೂಲದ ಶೂಟರ್ ಬಂಧನ!

Share
ಡೊನಾಲ್ಡ್ ಟ್ರಂಪ್
Share

ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ಪ್ರತಿಷ್ಠಿತ ಹಿಲ್ಟನ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ (WHCD) ವೇಳೆ ಗುಂಡಿನ ದಾಳಿ ನಡೆದಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ. ದಾಳಿ ನಡೆಸಿದ ಶಂಕಿತ ಆರೋಪಿಯನ್ನು ಕ್ಯಾಲಿಫೋರ್ನಿಯಾ ಮೂಲದ ಕೋಲ್ ಟಾಮಸ್ ಅಲೆನ್ (31) ಎಂದು ಗುರುತಿಸಲಾಗಿದ್ದು, ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.

ಘಟನೆ ವಿವರ:

ಔತಣಕೂಟ ನಡೆಯುತ್ತಿದ್ದ ವೇಳೆ ಶಂಕಿತ ಆರೋಪಿ ಕೋಲ್ ಟಾಮಸ್ ಅಲೆನ್ ಶೂಟಿಂಗ್ ಗನ್ ಹಾಗೂ ಚಾಕುಗಳೊಂದಿಗೆ ಭದ್ರತಾ ವಲಯವನ್ನು ಭೇದಿಸಲು ಯತ್ನಿಸಿದ್ದಾನೆ. ಈ ವೇಳೆ ಆತ ಗುಂಡು ಹಾರಿಸಿದ್ದು, ಸ್ಥಳದಲ್ಲಿದ್ದ ನೂರಾರು ಅತಿಥಿಗಳು ಭಯಭೀತರಾಗಿ ಟೇಬಲ್‌ಗಳ ಅಡಿಯಲ್ಲಿ ಅವಿತು ಕುಳಿತರು. ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಟ್ರಂಪ್ ದಂಪತಿಯನ್ನು ಸುರಕ್ಷಿತವಾಗಿ ವೇದಿಕೆಯಿಂದ ಕರೆದೊಯ್ದರು.

ಗುಂಡಿನ ಚಕಮಕಿಯಲ್ಲಿ ಒಬ್ಬ ಸೀಕ್ರೆಟ್ ಸರ್ವಿಸ್ ಅಧಿಕಾರಿಗೆ ಗುಂಡು ತಗುಲಿದ್ದರೂ, ಬುಲೆಟ್‌ಪ್ರೂಫ್ ಜಾಕೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ ಶಂಕಿತನ ಫೋಟೋಗಳನ್ನು ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ (Truth Social) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ” ಎಂದು ಟ್ರಂಪ್ ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *