ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕುಂಟು ನೆಪ ಬೇಡ, ಆದಷ್ಟು ಬೇಗ ಒಳಮೀಸಲಾತಿ ಜಾರಿಗೊಳಿಸಿ: ಆಲೂರು ನಿಂಗರಾಜ್ ಒತ್ತಾಯ

On: October 30, 2024 10:17 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-10-2024

ದಾವಣಗೆರೆ: ಸಮಾಜವಾದಿ, ಅಹಿಂದಾ ಹೆಸರು ಜಪಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸುಪ್ರೀಂಕೋರ್ಟಿನ ಸೂಚನೆಯಂತೆ ಒಳಮೀಸಲಾತಿಯನ್ನು ಕೂಡಲೇ ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಒತ್ತಾಯಿಸಿ ಮಾದಿಗ ಜಾಗೃತಿ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಸಮಿತಿಯ ಸಮಿತಿಯ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ್ ಮಾತನಾಡಿ, ಮಾದಿಗ ಸಮುದಾಯ ಕಳೆದ 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಅನೇಕ ಹೋರಾಟ ಮಾಡುತ್ತಾ ಬಂದಿದ್ದು, ಹೋರಾಟ ಮಾಡಿದ್ದರ ಫಲವಾಗಿ ಈ ಹಿಂದೆ ಕಾಂಗ್ರೇಸ್ ಪಕ್ಷದ ನೇತೃತ್ವದ ಎಸ್.ಎಂ. ಕೃಷ್ಣ ಸರ್ಕಾರ ಹೋರಾಟದ ಮನವಿಗೆ ಸ್ಪಂದಿಸಿ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಎ.ಜೆ. ಸದಾಶಿವ ಆಯೋಗ ರಚನೆ ಮಾಡಿ ನೂರಾರು ಕೋಟಿ ವ್ಯಯಿಸಿ ವರದಿ ತಯಾರಿಸಿತ್ತು. ಆದರೆ, ಬಿಜೆಪಿ ನೇತೃತ್ವದ ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ ವರದಿ ಅನುಷ್ಠಾನಗೊಳಿಸಲು ಪ್ರಯತ್ನಪಟ್ಟಿದ್ದು ಸರಿಯಷ್ಟೇ ನಂತರ ಅನೇಕ ಸಮಸ್ಯೆಗಳ ನೆಪವೊಡ್ಡಿ ಸದಾಶಿವ ಆಯೋಗದ ವರದಿ ಮೂಲೆ ಗುಂಪಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಸಮುದಾಯದ ನ್ಯಾಯಕ್ಕೋಸ್ಕರ ಮಾದುಸ್ವಾಮಿ ಆಯೋಗವನ್ನು ರಚನೆ ಮಾಡಿ, ವರದಿಯ ಎಲ್ಲಾ ದತ್ತಾಂಶಗಳನ್ನು ಕೂಲಂಕುಶವಾಗಿ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಅದರ ಫಲವಾಗಿ ಶೇಕಡಾ 2 ಹೆಚ್ಚಿಸುವುದರೊಂದಿಗೆ ಮಾದಿಗ ಸಮುದಾಯಕ್ಕೆ ಶೇಕಡಾ 6, ಛಲವಾದಿ ಸಮುದಾಯಕ್ಕೆ 5.5, ಕೊಲಂಬೂ ಜಾತಿಗಳಿಗೆ 4 ಇತರೆ 1.5 ಇತರೆ ಸಣ್ಣ ಪುಟ್ಟ ಸಮುದಾಯಗಳಿಗೆ ನ್ಯಾಯ ಸಮ್ಮತವಾಗಿ ಮೀಸಲಾತಿಯನ್ನು ಹಂಚಿಕೆ ಮಾಡಿತ್ತು. ಆದರೆ ಸಮಾಜವಾದಿ ಹಿನ್ನೆಲೆಯ ಮುಖ್ಯಮಂತ್ರಿಗಳು ಇದನ್ನು ಬೆಂಬಲಿಸಲಿಲ್ಲ ಎಂದು ಹೇಳಿದರು.

ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುತ್ತೇನೆಂದು ಹೇಳುತ್ತಾ ಬಂದಿದ್ದ ಸಿದ್ದರಾಮಯ್ಯನವರನ್ನು ನಂಬಿ ನಾವು ಮತ ಹಾಕಿ ಅವರನ್ನು ಗೆಲ್ಲಿಸಿದೆವು. ಆದರೆ ಅವರು ನಮ್ಮ ಬೇಡಿಕೆಯನ್ನು ಲಘುವಾಗಿ ತೆಗೆದುಕೊಂಡಿದ್ದು, ಉಪಚುನಾವಣೆಯ ಈ ಸಂದರ್ಭದಲ್ಲಿ ಮತ್ತೊಂದು ಆಯೋಗ ರಚಿಸುವ ಮೂರ್ಖ ಭರವಸೆ ನೀಡಿದ್ದಾರೆ. ಸುಪ್ರೀಂ ಆದೇಶ ಕೂಡಲೇ ಜಾರಿಗೊಳಿಸಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎಂ.ಚಂದ್ರಪ್ಪ, ಎಂ.ಹಾಲೇಶ್, ಹೆಚ್.ಸಿ. ಗುಡ್ಡಪ್ಪ, ಜಯಪ್ರಕಾಶ್, ರವಿ, ಜಿ.ಹೆಚ್. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment