ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಮೇ 4 ರಂದು ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 4 ರ ಬೆಳಿಗ್ಗೆ 6 ಗಂಟೆಯಿಂದ ಮೇ 6 ರ ಬೆಳಿಗ್ಗೆ 6. ಗಂಟೆಯವರೆಗೆ ದಾವಣಗೆರೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದೆ
ದಾವಣಗೆರೆ ನಗರದಾದ್ಯಂತ ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆ, ರಾಲಿ, ಜಾಥಾ ಹಾಗೂ ಸಭೆ-ಸಮಾರಂಭಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡುವುದು ಹಾಗೂ ಪಟಾಕಿ ಸಿಡಿಸುವುದಕ್ಕೆ ಅವಕಾಶವಿರುವುದಿಲ್ಲ.
ಅಕ್ರಮವಾಗಿ ಗುಂಪು ಸೇರುವುದು ಹಾಗೂ ಘೋಷಣೆಗಳನ್ನು ಕೂಗುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.
- Ban on Victory Processions
- Davanagere Election Updates
- Davanagere South Bypoll
- DC Gangadharaswamy
- DRR College Counting Center
- Prohibitory Orders
- Section 144 in Davanagere
- Vote Counting
- ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
- ಡಿಆರ್ಆರ್ ವಿದ್ಯಾಸಂಸ್ಥೆ
- ದಾವಣಗೆರೆ ದಕ್ಷಿಣ ಉಪಚುನಾವಣೆ
- ದಾವಣಗೆರೆ ಸುದ್ದಿ
- ನಿಷೇಧಾಜ್ಞೆ ಜಾರಿ
- ಪಟಾಕಿ ಸಿಡಿಸಲು ನಿರ್ಬಂಧ
- ಮತ ಎಣಿಕೆ
- ವಿಜಯೋತ್ಸವ ನಿಷೇಧ





Leave a comment