ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಮತ ಎಣಿಕೆ ಬಿರುಸಿನಿಂದ ಸಾಗಿದೆ. ಏಳು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪರಿಗೆ
ಮೊದಲ ಬಾರಿಗೆ ಹಿನ್ನೆಡೆ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ ಸಾಧಿಸಿದ್ದಾರೆ.
8ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 1078 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿತ್ತು. ಬರೋಬ್ಬರಿ 8500ಕ್ಕೂ ಹೆಚ್ಚು ಮುನ್ನಡೆ
ಸಾಧಿಸಿದ್ದ ಬಿಜೆಪಿ ಅಭ್ಯರ್ಥಿಗೆ ಮೊದಲ ಬಾರಿಗೆ ಹಿನ್ನೆಡೆ ಆಗಿದೆ. ಈ ಮೂಲಕ ಕಾಂಗ್ರೆಸ್ ಮತ್ತೆ ಮುನ್ನಡೆಯಲ್ಲಿದ್ದರೆ, ಬಿಜೆಪಿಗೆ ಶಾಕ್ ಕೊಟ್ಟಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ಮುಂದುವರಿದಿದ್ದು, ಆರು ಸುತ್ತುಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 8539 ಮತಗಳಿಂದ ಬಿಜೆಪಿ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಶಾಮನೂರು ಶಿವಶಂಕರಪ್ಪರ ಮೊಮ್ಮಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಿನ್ನೆಡೆ ಅನುಭವಿಸಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಪ್ರದರ್ಶನ ತೋರಿದ್ದು, ಕಾಂಗ್ರೆಸ್ ಗೆ ಶಾಕ್ ನೀಡಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಬಿರುಸುಗೊಂಡಿದೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ 572 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಿನ್ನೆಡೆ ಅನುಭವಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಸಮರ್ಥ್ ಶಾಮನೂರು 3134 ಮತಗಳನ್ನು ಪಡೆದಿದ್ದರೆ, ಶ್ರೀನಿವಾಸ್ ದಾಸಕರಿಯಪ್ಪ ಅವರು 3711 ಮತಗಳನ್ನು ಪಡೆಯುವ ಮೂಲಕ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎಸ್ ಡಿಪಿಐ ಅಭ್ಯರ್ಥಿ ಅಪ್ಸರ್ ಕೊಡ್ಲಿಬೆಟ್ಟು 638 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಹಲವು ಅಭ್ಯರ್ಥಿಗಳು ಎರಡಂಕಿಯನ್ನೂ ದಾಟಿಲ್ಲ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿಸಿದ್ದು, ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು 2ನೇ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭಾರೀ ಮುನ್ನಡೆ ಸಾಧಿಸಿದ್ದು, ಎರಡನೇ ಸುತ್ತಿನ ಮತ ಎಣಿಕೆ ಫಲಿತಾಂಶದಲ್ಲಿ 712 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆ ವೇಳೆ ಮುನ್ನಡೆ ಸಾಧಿಸಿದ್ದ ಸಮರ್ಥ್ ಶಾಮನೂರು ಮೊದಲ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಆದರೆ ಮತ್ತೆ ಎರಡನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೂರನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ. ನಾಲ್ಕು ಮತ್ತು ಐದನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಿನ್ನೆಡೆಯಲ್ಲಿದ್ದಾರೆ. ಆರನೇ ಸುತ್ತಿನಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಗೆ ಠಕ್ಕರ್ ಕೊಟ್ಟಿದೆ.
- BJP vs Congress Davanagere
- Davanagere South Bypoll Result
- Davanagere South Election Result 2026
- Karnataka Byelection Live Updates
- Samarth Shamanur Trailing
- SDPI Davanagere South.
- Shamanur Shivashankarappa Grandson
- Srinivas Dasakariyappa Lead
- ಅಪ್ಸರ್ ಕೊಡ್ಲಿಬೆಟ್ಟು ಎಸ್ಡಿಪಿಐ.
- ಕರ್ನಾಟಕ ಉಪಚುನಾವಣೆ ಲೈವ್ ಅಪ್ಡೇಟ್ಸ್
- ದಾವಣಗೆರೆ ಉಪಚುನಾವಣೆ 2026
- ದಾವಣಗೆರೆ ದಕ್ಷಿಣ ಉಪಚುನಾವಣೆ
- ಬಿಜೆಪಿ ವರ್ಸಸ್ ಕಾಂಗ್ರೆಸ್ ದಾವಣಗೆರೆ
- ಶಾಮನೂರು ಶಿವಶಂಕರಪ್ಪ ಕ್ಷೇತ್ರ
- ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ
- ಸಮರ್ಥ್ ಶಾಮನೂರು ಹಿನ್ನೆಡೆ





Leave a comment