Home ದಾವಣಗೆರೆ ದಾವಣಗೆರೆ ಬೈ ಎಲೆಕ್ಷನ್ ನ 10ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5220 ಮತಗಳ ಮುನ್ನಡೆ, ಶ್ರೀನಿವಾಸ್ ದಾಸಕರಿಯಪ್ಪರಿಗೆ ಹಿನ್ನೆಡೆ!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಬೈ ಎಲೆಕ್ಷನ್ ನ 10ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5220 ಮತಗಳ ಮುನ್ನಡೆ, ಶ್ರೀನಿವಾಸ್ ದಾಸಕರಿಯಪ್ಪರಿಗೆ ಹಿನ್ನೆಡೆ!

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ನ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, 10ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಶಾಮನೂರು ಶಿವಶಂಕರಪ್ಪರ ಮೊಮ್ಮಗ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು 5220 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಈ ಮೂಲಕ ಮತ್ತೆ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಹತ್ತು ಸುತ್ತುಗಳ ಪೈಕಿ ಏಳು ಸುತ್ತುಗಳಲ್ಲಿ ಬಿಜೆಪಿ ಆರಂಭದಲ್ಲಿ ಮುನ್ನಡೆ ಸಾಧಿಸಿತ್ತು. ಎಂಟು, ಒಂಭತ್ತು ಮತ್ತು ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಸಮರ್ಥ್ ಶಾಮನೂರು ಅವರು ಹತ್ತನೇ ಸುತ್ತಿನಲ್ಲಿ 5220 ಮತಗಳಿಂದ ಮುನ್ನಡೆ ಸಾಧಿಸಿದ್ದು, ಫಲಿತಾಂಶ ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎಂಟನೇ ಸುತ್ತಿನಲ್ಲಿ 1073 ಮತಗಳ ಮುನ್ನಡೆ ಗಳಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 3945 ಮತಗಳ ಮುನ್ನಡೆ ಸಾಧಿಸಿದ್ದಾರೆ.

9ನೇ ಸುತ್ತಿನ ಮತ ಎಣಿಕೆ ಮುಗಿದಿದ್ದು, ಆರಂಭದಲ್ಲಿ ಏಳು ಸುತ್ತುಗಳಲ್ಲಿ ಹಿನ್ನೆಡೆಯಲ್ಲಿದ್ದ ಸಮರ್ಥ್ ಶಾಮನೂರು 8 ಮತ್ತು 9 ನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಮತ್ತೆ ಹಾವು ಏಣಿ ಆಟ ಮುಂದುವರಿದಿದೆ. ಅಂಚೆ ಮತಗಳಲ್ಲಿ ಮುನ್ನಡೆ ಸಾಧಿಸಿದ್ದ ಸಮರ್ಥ್ ಶಾಮನೂರು ಬಳಿಕ ಹಿನ್ನೆಡೆ ಅನುಭವಿಸಿದ್ದರು. ಸತತ ಏಳು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪರು ಎಂಟು ಮತ್ತು 9 ನೇ ಸುತ್ತಿನಲ್ಲಿ
ಹಿನ್ನೆಡೆ ಅನುಭವಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮುನ್ನಡೆ ಮತ್ತು ಹಿನ್ನೆಡೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಅನುಭವಿಸಿದ್ದಾರೆ. ಆದರೆ ಸದ್ಯಕ್ಕೆ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಸಂತಸಕ್ಕೆ ಕಾರಣವಾಗಿದೆ. ಆರಂಭದ ಏಳು ಸುತ್ತುಗಳಲ್ಲಿ ಹಿನ್ನೆಡೆ ಹೊಂದಿದ್ದರಿಂದ ಕಾಂಗ್ರೆಸ್ ನಲ್ಲಿ ತಳಮಳಕ್ಕೆ ಕಾರಣವಾಗಿತ್ತು. ಸದ್ಯಕ್ಕೆ ಅಲ್ಪ ಪ್ರಮಾಣದಲ್ಲಿ ಮುನ್ನಡೆ ಸಾಧಿಸಿರುವುದು ಸಮಾಧಾನ ತಂದಿದೆ.

Share

Leave a comment

Leave a Reply

Your email address will not be published. Required fields are marked *