SUDDIKSHANA KANNADA NEWS/ DAVANAGERE/ DATE:07-11-2024
ಬೆಂಗಳೂರು: ಪ್ರಸಕ್ತ(2024-25) ಸಾಲಿನ ಆಯವ್ಯಯದಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಸಂಚಾರಿ, ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆ ಅನುಷ್ಠಾನ ಮಾಡಬೇಕಿದೆ.
ಆ ದಿಸೆಯಲ್ಲಿ ಕನಿಷ್ಠ 20 ಕುರಿಗಳನ್ನು ಹೊಂದಿದ್ದು ಸಂಚಾರಿ, ವಲಸೆ ಹೋಗುವ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಸಂಚಾರಿ ವಲಸೆ ಕುರಿಗಾಹಿಗಳು ಗುರುತಿನ ಚೀಟಿ ಪಡೆಯಲು ತಮ್ಮ ವ್ಯಾಪ್ತಿಗೆ ಬರುವ ಸ್ಥಳೀಯ ಪಶು ವೈದ್ಯಾಧಿಕಾರಿಗಳಿಂದ ಮಾಹಿತಿಯೊಂದಿಗೆ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು (ಆಡಳಿತ), ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅವರಿಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು(ಆಡಳಿತ), ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಹಾಗೂ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ., ಮೈಸೂರು ಅಥವಾ ದೂ.ಸಂ. 9845623137 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.