Home ದಾವಣಗೆರೆ ಮನೆ ದೇವರು ಶ್ರೀ ಕಲ್ಲೇಶ್ವರ ಸ್ವಾಮಿ, ತಾತ ಶಾಮನೂರು ಶಿವಶಂಕರಪ್ಪರ ಹೆಸರನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಾವಣಗೆರೆನವದೆಹಲಿಬೆಂಗಳೂರು

ಮನೆ ದೇವರು ಶ್ರೀ ಕಲ್ಲೇಶ್ವರ ಸ್ವಾಮಿ, ತಾತ ಶಾಮನೂರು ಶಿವಶಂಕರಪ್ಪರ ಹೆಸರನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

Share
ಶಾಮನೂರು ಶಿವಶಂಕರಪ್ಪ
Share

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಮರ್ಥ್ ಶಾಮನೂರು ಅವರು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ ಮನೆದೇವರಾದ ಶ್ರೀ ಕಲ್ಲೇಶ್ವರ ಸ್ವಾಮಿ ಹಾಗೂ ತಾತನವರಾದ ಶಾಮನೂರು ಶಿವಶಂಕರಪ್ಪನವರ ಹೆಸರನ್ನು ಸ್ಮರಿಸಿಕೊಂಡು ಅವರು ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಶಾಸಕರು, ರಾಜಕೀಯ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ವಿಧಾನಸಭೆ ಸಭಾಪತಿಗಳಾದ ಯು. ಟಿ. ಖಾದರ್ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಉಪಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಹಲವು ಶಾಸಕರು ಮತ್ತು ಪ್ರಮುಖ ನಾಯಕರು ಉಪಸ್ಥಿತರಿದ್ದು ಶುಭಾಶಯ ಕೋರಿದರು.

ಪ್ರಮಾಣ ವಚನ ಸ್ವೀಕಾರದ ನಂತರ ಮಾತನಾಡಿದ ಸಮರ್ಥ್ ಶಾಮನೂರು ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಜನತೆ ತಮಗೆ ತೋರಿದ ವಿಶ್ವಾಸ ಹಾಗೂ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆಗಳಿಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ವೃದ್ಧಿ, ಶಿಕ್ಷಣ, ಆರೋಗ್ಯ, ಯುವಜನರ ಸಬಲೀಕರಣ ಹಾಗೂ ಜನಪರ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಹೇಳಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಇಟ್ಟಿರುವ ನಂಬಿಕೆ ದೊಡ್ಡ ಜವಾಬ್ದಾರಿಯಾಗಿದೆ. ಜನರ ಆಶೀರ್ವಾದ ಹಾಗೂ ಹಿರಿಯರ ಮಾರ್ಗದರ್ಶನದೊಂದಿಗೆ ಕ್ಷೇತ್ರವನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ಕೊಂಡೊಯ್ಯುವ ಸಂಕಲ್ಪ ಹೊಂದಿದ್ದೇನೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕರು ಹಾಗೂ ಗಣ್ಯರು, ಪಕ್ಷದ ಕಾರ್ಯಕರ್ತರು, ಕುಟುಂಬದ ಸದಸ್ಯರು, ಅಭಿಮಾನಿಗಳು ಸಮರ್ಥ್ ಶಾಮನೂರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಸಾರ್ವಜನಿಕ ಜೀವನದಲ್ಲಿ ಉತ್ತಮ ಸೇವೆ ಸಲ್ಲಿಸುವಂತೆ ಶುಭ ಹಾರೈಸಿದರು.

Share

Leave a comment

Leave a Reply

Your email address will not be published. Required fields are marked *