SUDDIKSHANA KANNADA NEWS/ DAVANAGERE/ DATE:07-11-2024
ದಾವಣಗೆರೆ: ಶಿಗ್ಗಾವಿ ಉಪಚುನಾವಣೆ ಕಣ ರಂಗೇರಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು ಪಂಚಮಸಾಲಿ ಸಮಾಜದ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ.
ಹೌದು. ಈ ಹಿನ್ನೆಲೆಯಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿದ ಯಾಸಿರ್ ಖಾನ್ ಪಠಾಣ್ ಅವರು ಮಠಾಧಿಪತಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ, ಅರಣ್ಯ,ಪರಿಸರ ಮತ್ತು ಜೀವಶಾಸ್ತ್ರ ಖಾತೆ ಸಚಿವ ಈಶ್ವರ ಖಂಡ್ರೆ ಅವರು, ಪೌರಾಡಳಿತ ಖಾತೆ ಸಚಿವ ರಹೀಂ ಖಾನ್, ಗಡಿನಾಡು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹಾಗೂ ಶಿಗ್ಗಾವಿ ವಿಧಾನಸಭಾ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಅವರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದು ಸಮಾಲೋಚನೆ ನಡೆಸಿದರು.
ಶಿಗ್ಗಾವಿ ಕ್ಷೇತ್ರದಲ್ಲಿ ಪಂಚಮಸಾಲಿಗಳು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಇಲ್ಲಿ ಹೆಚ್ಚಿನ ಮತಗಳಿವೆ. ಹಾಗಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಈ ಸಮಾಜದ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಸಚಿವರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪಂಚಮಸಾಲಿ ಸಮಾಜದ ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದು ಕುತೂಹಲ ಕೆರಳಿಸಿದೆ.