ದಾವಣಗೆರೆ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ -UG 2026 ಪರೀಕ್ಷೆಯ ಅಕ್ರಮ ಮತ್ತು ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಪರೀಕ್ಷೆ ಮೇಲಿನ ನಂಬಿಕೆಯನ್ನು ವಿದ್ಯಾರ್ಥಿಗಳು ಕಳೆದುಕೊಳ್ಳುವಂತಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಜಾಲ ಕೆಲಸ ಮಾಡುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ ಎಂದು ಕೆಪಿಸಿಸಿ ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರು ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯುವ ಮುಖಂಡ ಬಿ. ಎನ್. ವಿನಾಯಕ್ ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು. ಆಗ ಮಾತ್ರ ಸತ್ಯ ಹೊರ ಬರಲಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಗರಣದ ಹಿಂದೆ ಇರುವ ಪ್ರಭಾವಿ ವ್ಯಕ್ತಿಗಳನ್ನು ಪತ್ತೆಹಚ್ಚಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖೆ ನಡೆಯಬೇಕು. ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.ಭವಿಷ್ಯದಲ್ಲಿ ಇಂತಹ ಪಮಾದಗಳು ಮರುಕಳಿಸದಂತೆ ಪಾರದರ್ಶಕ ಮತ್ತು ದೋಷಮುಕ್ತ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಮೇ 3 ರಂದು ನಡೆದಿದ್ದ NEET-UG ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ತನಿಖೆಯ ವೇಳೆ ಕೇರಳದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ರಾಜಸ್ಥಾನದ ಸ್ನೇಹಿತರಿಗೆ ‘ಗೆಸ್ ಪೇಪರ್’ ಕಳುಹಿಸಿರುವುದು ಪತ್ತೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷೆಯನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ. ಈ ಪರೀಕ್ಷೆಯನ್ನು ಶೀಘ್ರದಲ್ಲೇ ಮರು ನಡೆಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಆದರೆ ಪರೀಕ್ಷೆ ರದ್ದುಗೊಳಿಸಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ವ್ಯವಸ್ಥೆಯ ಮೇಲಿದ್ದ ನಂಬಿಕೆ ಕುಸಿದಿದೆ. ಈ ನಂಬಿಕೆಯನ್ನು ಮರುಸ್ಥಾಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸುಮಾರು 23 ಲಕ್ಷ ವಿದ್ಯಾರ್ಥಿಗಳ ಪಾಡೇನು? ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತದೆಯೇ ಎಂದು ಬಿ. ಎನ್. ವಿನಾಯಕ್ ಪ್ರಶ್ನಿಸಿದ್ದಾರೆ.
- BN Vinayak
- DAVANAGERE NEWS
- Education Minister Dharmendra Pradhan Resignation
- KPCC
- Medical Entrance Scam.
- NEET-UG 2026 ಅಕ್ರಮ
- NTA Exam Cancelled
- Paper Leak
- Students Future
- Supreme Court Investigation
- ಎನ್‌ಟಿಎ ಪರೀಕ್ಷೆ ರದ್ದು
- ಕೆಪಿಸಿಸಿ
- ದಾವಣಗೆರೆ ಸುದ್ದಿ
- ಪತ್ರಿಕೆ ಸೋರಿಕೆ
- ಬಿ. ಎನ್. ವಿನಾಯಕ್
- ವಿದ್ಯಾರ್ಥಿಗಳ ಭವಿಷ್ಯ
- ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಸುಪ್ರೀಂ ಕೋರ್ಟ್ ತನಿಖೆ. NEET-UG 2026 Scam





Leave a comment