SUDDIKSHANA KANNADA NEWS/ DAVANAGERE/ DATE:12-11-2024
ಬೆಂಗಳೂರು: ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ ಎಂದು ಸಿಎಂ ಸಿದ್ದರಾಮಯ್ಯರ ಕಾರ್ಯಾಲಯವು ನೀಡಿರುವ ಸ್ಪಷ್ಟನೆ ಹೇಳಲಾಗಿದೆ.
ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಶೇಕಡಾ 4ರಷ್ಟು ಮೀಸಲಾತಿಯನ್ನು ಸರ್ಕಾರಿ ಟೆಂಡರ್ ಗಳಲ್ಲಿ ರಾಜ್ಯ ಸರ್ಕಾರದ ಮುಂದಿದ್ದು, ಜಾರಿಗೊಳಿಸುವ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ. ಆದ್ರೆ, ಬೇಡಿಕೆ ಇದೆ, ಪ್ರಸ್ತಾವನೆ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಳ್ಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡಿದೆ.