ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಗಂಡ ಗಾಬರಿಯಾಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ 17ನೇ ಮೈಲಿಕಲ್ಲು, ಕಣಗಲಕೊಪ್ಪ ಗ್ರಾಮದ ನಿವಾಸಿ ಅನಿಲ್ ಕುಮಾರ್ ಎಂಬುವವರ ಪತ್ನಿ ಸುಮಾ ಕೆ.ಎಸ್ (32), ಮಕ್ಕಳಾದ ಜಯಂತ್ (14) ಹಾಗೂ ವಿಸ್ಮಿತ (12) ಮೇ 13 ರಂದು ತವರುಮನೆಗೆಂದು ಮಕ್ಕಳನ್ನು ಕರೆದುಕೊಂಡು ಹೋದವರು ಈವರೆಗೆ ಮನೆಗೂ ಮರಳದೆ, ತವರುಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ.
ಕಾಣೆಯಾದವರ ಚಹರೆ ವಿವರಗಳು:
ಸುಮಾ ಕೆ.ಎಸ್. (32 ವರ್ಷ): 5.0 ಅಡಿ ಎತ್ತರ, ದುಂಡುಮುಖ, ದೃಢಕಾಯ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿದ್ದಾರೆ.
ಜಯಂತ್ (14 ವರ್ಷ): 04 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ. ನೀಲಿ ಮತ್ತು ಬಿಳಿ ಬಣ್ಣದ ಚೌಕಳಿ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾರೆ.
ವಿಸ್ಮಿತ (12 ವರ್ಷ): 04 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿರುತ್ತಾರೆ. ನೀಲಿ ಬಣ್ಣದ ಚೂಡಿದಾರ ಧರಿಸಿದ್ದಾರೆ.
ಈ ಮೂವರ ಬಗ್ಗೆ ಯಾವುದೇ ಸುಳಿವು ಅಥವಾ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣ ಮಾಳೂರು ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬೇಕಾದ ಸಂಖ್ಯೆಗಳು: 08181-235142, 08181-228310, 08182-261413, 9480803353, 9480803333, 9480803300.





Leave a comment