Home ಕ್ರೈಂ ನ್ಯೂಸ್ BIG BREAKING: ಪುಲ್ವಾಮಾ ದಾಳಿ ಮಾಸ್ಟರ್‌ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಿಓಕೆಯಲ್ಲಿ ಅಪರಿಚಿತ “ದುರಂಧರ್”ರಿಂದ ಫಿನಿಶ್!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

BIG BREAKING: ಪುಲ್ವಾಮಾ ದಾಳಿ ಮಾಸ್ಟರ್‌ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಿಓಕೆಯಲ್ಲಿ ಅಪರಿಚಿತ “ದುರಂಧರ್”ರಿಂದ ಫಿನಿಶ್!

Share
ಪುಲ್ವಾಮಾ
Share

ನವದೆಹಲಿ: ಭಾರತವನ್ನೇ ನಡುಗಿಸಿದ್ದ ಪುಲ್ವಾಮಾ ಭೀಕರ ಭಯೋತ್ಪಾದನಾ ದಾಳಿಯ ಪ್ರಮುಖ ಸಂಚುಗಾರರಲ್ಲಿ (Mastermind) ಒಬ್ಬನಾದ ಹಮ್ಜಾ ಬುರ್ಹಾನ್‌ನನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮುಜಾಫರಾಬಾದ್‌ನಲ್ಲಿ ಅಟ್ಯಾಕ್

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್‌ನಲ್ಲಿ ಅಡಗಿ ಕುಳಿತಿದ್ದ ಉಗ್ರ ಹಮ್ಜಾ ಬುರ್ಹಾನ್‌ನನ್ನು ಗುರಿಯಾಗಿಸಿಕೊಂಡು ಬಂದ ಅಪರಿಚಿತ ಬಂದೂಕುಧಾರಿಗಳ ಗುಂಪೊಂದು ಆತನ ಮೇಲೆ ಗುಂಡಿನ ಸುರಿಮಳೆಗರೆದಿದೆ. ತೀವ್ರ ಗಾಯಗೊಂಡ ಬುರ್ಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದಾಳಿ ನಡೆಸಿದವರು ಯಾರು ಎಂಬುದು ಇನ್ನು ಪತ್ತೆಯಾಗಿಲ್ಲ.

ಪುಲ್ವಾಮಾ ದಾಳಿಯ ಹಿನ್ನೆಲೆ

2019 ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರು ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದರು. ಈ ಭೀಕರ ಘಟನೆಯಲ್ಲಿ ಭಾರತದ 40 ಕ್ಕೂ ಹೆಚ್ಚು ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಈ ದಾಳಿಯ ಮಾಸ್ಟರ್‌ಮೈಂಡ್‌ಗಳಲ್ಲಿ ಹಮ್ಜಾ ಬುರ್ಹಾನ್ ಕೂಡ ಒಬ್ಬನಾಗಿದ್ದ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ.

Share

Leave a comment

Leave a Reply

Your email address will not be published. Required fields are marked *