SUDDIKSHANA KANNADA NEWS/ DAVANAGERE/ DATE:14-11-2024
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಮುಕ್ತ ಬಿಜಲಿ ಯೋಜನೆಯಡಿ ಸೌರ ಫಲಕ ಅಳವಡಿಸಿಕೊಳ್ಳಲು ಶೇ.60 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೋಲಾರ್ ರೂಫ್ ಟಾಪ್ ಸಿಸ್ಟಮ್ಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಿದ್ದು, 1 ಕಿ.ವ್ಯಾ ಗೆ ರೂ.30 ಸಾವಿರ, 2 ಕಿ.ವ್ಯಾ ಗೆ ರೂ.60 ಸಾವಿರ ಮತ್ತು 3 ಕಿ.ವ್ಯಾ ಗೆ ರೂ.78 ಸಾವಿರ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್ www.pmsuryaghar.gov.in ಅಥವಾ https://gescomsrtpv.in/SRTPV/ ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.1912 ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.