ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

JOB NEWS: ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ

On: November 14, 2024 5:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:14-11-2024

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 7 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ : 21.11.2024 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‌ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ ನಕಲು ಪ್ರತಿಗಳು ಮತ್ತು ಇತ್ತೀಚಿನ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 08182-222382 ನ್ನು ಸಂಪರ್ಕಿಸುವುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment