Home ದಾವಣಗೆರೆ ರುಡ್‌ಸೆಟ್‌ ಸಂಸ್ಥೆಯಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ: ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ರುಡ್‌ಸೆಟ್‌ ಸಂಸ್ಥೆಯಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ: ಅರ್ಜಿ ಆಹ್ವಾನ

Share
ಅರ್ಜಿ
Share

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಕಂಪ್ಯೂಟರ್‌ ಟ್ಯಾಲಿ ಕುರಿತ 38 ದಿನಗಳ ಉಚಿತ ತರಬೇತಿಯನ್ನು ಜೂನ್ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ – ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ : 9481506564, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *