ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ವದಂತಿ. ದೆಹಲಿಯಲ್ಲಿ ನಡೆದ 6 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ ರಾಜ್ಯಸಭೆ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ನವದೆಹಲಿ: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಸಂಚಲನ ಮೂಡಿಸಿದ್ದ ‘ಮುಖ್ಯಮಂತ್ರಿ ಬದಲಾವಣೆ’ ಹಾಗೂ ‘ನಾಯಕತ್ವ ಬದಲಾವಣೆ’ ವದಂತಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ತೆರೆ ಎಳೆದಿದೆ. ದೆಹಲಿಯಲ್ಲಿ ನಡೆದ ಪ್ರಮುಖ ನಾಯಕರ 6 ಗಂಟೆಗಳ ಸುದೀರ್ಘ ಮ್ಯಾರಥಾನ್ ಸಭೆಯ ಬಳಿಕ, “ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಸಿಎಂ ಬದಲಾವಣೆ ಇಲ್ಲ” ಎಂದು ಪಕ್ಷ ಅಧಿಕೃತವಾಗಿ ಸ್ಪಷ್ಟಪಡಿಸಿದೆ.
ಆದರೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಂದಿನ ಎರಡು ವರ್ಷ ಡಿ. ಕೆ. ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯರಿಗೆ ಸೂಚಿಸಿದ್ದಾರೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ಸಿದ್ದರಾಮಯ್ಯ ನಾನು ರಾಷ್ಟ್ರ ರಾಜಕಾರಣಕ್ಕೆ ಬರಲ್ಲ. ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ ನಿಮಗೆ 2013ರಿಂದ 2018ರವರೆಗೆ ಮತ್ತು 2023ರಿಂದ 2026ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ನೀಡಿದ್ದೇವೆ. ಇನ್ನುಳಿದ ಎರಡು ವರ್ಷ ಡಿ. ಕೆ. ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಿ ಎಂದಿದ್ದಾರೆ.
ಆದರೆ ಸಿದ್ದರಾಮಯ್ಯರು ಮಾತ್ರ ಏನು ಮಾತನಾಡಿಲ್ಲ. ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಆದರೆ ಇಬ್ಬರು ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೊರಗಡೆ ಹೇಳಿದರೂ ಸಭೆಯಲ್ಲಿ ಅಧಿಕಾರಕ್ಕೆ ಅಂಟಿ ಕುಳಿತಿರುವುದು ಸ್ಪಷ್ಟ.
ಸಭೆಯ ಅಸಲಿ ಅಜೆಂಡಾ ಏನು? ಕಾಂಗ್ರೆಸ್ ಹೇಳಿದ್ದೇನು?
ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, “ಈ ಸಭೆಯು ಕೇವಲ ಕರ್ನಾಟಕದ ಮುಂಬರುವ ಮೂರು ಖಾಲಿ ಇರುವ ರಾಜ್ಯಸಭಾ ಸ್ಥಾನಗಳು ಹಾಗೂ ವಿಧಾನ ಪರಿಷತ್ (MLC) ಚುನಾವಣೆಗಳ ಅಭ್ಯರ್ಥಿ ಆಯ್ಕೆ ಕುರಿತಾಗಿತ್ತು. ಸಿಎಂ ಬದಲಾವಣೆ ಅಥವಾ ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದೆಲ್ಲಾ ಕೇವಲ ಕಲ್ಪಿತ ವದಂತಿಗಳು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದನ್ನೇ ಪುನರುಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಪರ ನಿಂತ ‘ಅಹಿಂದ’ ಬಲ:
೨೦೨೩ರ ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ 2 ವರ್ಷದ ಅವಧಿಗೆ ಅಧಿಕಾರ ಹಂಚಿಕೆ (ರೊಟೇಷನ್ ಸಿಎಂ) ಸೂತ್ರದಡಿ ಡಿ.ಕೆ. ಶಿವಕುಮಾರ್ ಬೆಂಬಲಿಗರು ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗಿರುವ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ದಲಿತರು) ಸಮುದಾಯಗಳ ಭದ್ರ ವೋಟ್ ಬ್ಯಾಂಕ್ ಅನ್ನು ಸದ್ಯಕ್ಕೆ ಕಳೆದುಕೊಳ್ಳಲು ಹೈಕಮಾಂಡ್ ಸಿದ್ಧವಿಲ್ಲ. ನೆರೆಯ ತಮಿಳುನಾಡು ಚುನಾವಣೆ ಮುಗಿದ ಬೆನ್ನಲ್ಲೇ ಈ ಬದಲಾವಣೆಯ ನಿರೀಕ್ಷೆಯಲ್ಲಿದ್ದ ಡಿ.ಕೆ. ಶಿವಕುಮಾರ್ ಕ್ಯಾಂಪ್ಗೆ ಈ ಸಭೆಯ ನಿರ್ಧಾರ ಸದ್ಯಕ್ಕೆ ನಿರಾಸೆ ಮೂಡಿಸಿದೆ.
- AHINDA politics Karnataka
- Congress Delhi meeting
- Congress High Command
- DK Shivakumar
- Karnataka CM Change
- Karnataka Politics News
- Karnataka Rajya Sabha polls
- Mallikarjun Kharge
- Rahul Gandhi
- Siddaramaiah
- ಅಹಿಂದ ರಾಜಕಾರಣ
- ಕರ್ನಾಟಕ ರಾಜಕೀಯ ಸುದ್ದಿಗಳು
- ಕರ್ನಾಟಕ ಸಿಎಂ ಬದಲಾವಣೆ
- ಕಾಂಗ್ರೆಸ್ ದೆಹಲಿ ಸಭೆ
- ಕಾಂಗ್ರೆಸ್ ಹೈಕಮಾಂಡ್ ಸಭೆ
- ಡಿಕೆ ಶಿವಕುಮಾರ್
- ಮಲ್ಲಿಕಾರ್ಜುನ ಖರ್ಗೆ
- ರಾಜ್ಯಸಭೆ ಚುನಾವಣೆ ಕರ್ನಾಟಕ
- ರಾಹುಲ್ ಗಾಂಧಿ
- ಸಿದ್ದರಾಮಯ್ಯ





Leave a comment