Home ದಾವಣಗೆರೆ BIG BREAKING: ಕರ್ನಾಟಕ ರಾಜಕೀಯದಲ್ಲಿ ಸಂಚಲನ: ಗುರುವಾರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ?
ದಾವಣಗೆರೆನವದೆಹಲಿಬೆಂಗಳೂರು

BIG BREAKING: ಕರ್ನಾಟಕ ರಾಜಕೀಯದಲ್ಲಿ ಸಂಚಲನ: ಗುರುವಾರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ?

Share
ಸಿದ್ದರಾಮಯ್ಯ
Share

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕ್ಷಿಪ್ರ ರಾಜಕೀಯ ವಿದ್ಯಮಾನವೊಂದು ಸಂಭವಿಸುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ದಟ್ಟ ವದಂತಿಗಳು ಹರಡಿವೆ.

2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕತ್ವದಲ್ಲಿ ಪ್ರಮುಖ ಬದಲಾವಣೆಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಮ್ಯಾರಥಾನ್ ಸಭೆಗಳ ನಂತರ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ನೀಡುವ ಪ್ರಸ್ತಾಪ ಮುಂದಿಡಲಾಗಿದೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯ ಮತ್ತು ಜಾತಿ ಜನಗಣತಿ ರಾಜತಾಂತ್ರಿಕತೆಯ ಭಾಗವಾಗಿ, ಸಿದ್ದರಾಮಯ್ಯ ಅವರನ್ನು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಮುಖ ಒಬಿಸಿ (OBC) ಮುಖವನ್ನಾಗಿ ಬಿಂಬಿಸಲು ಹೈಕಮಾಂಡ್ ಯೋಚಿಸಿದೆ. ಇದಕ್ಕಾಗಿ ಜೂನ್ 8 ರೊಳಗೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಮೂಲಕ ಅವರನ್ನು ದೆಹಲಿಗೆ ಕರೆಸಿಕೊಳ್ಳುವ ಸೂತ್ರ ಸಿದ್ಧವಾಗಿದೆ ಎಂದು ವರದಿಯಾಗಿದೆ.

ಈ ಬೆಳವಣಿಗೆಯಿಂದಾಗಿ ರಾಜ್ಯದಲ್ಲಿ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಅಧಿಕಾರ ಹಂಚಿಕೆ (ರೊಟೇಷನಲ್ ಸಿಎಂ) ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಒಂದು ವೇಳೆ ಕೆಳಗಿಳಿದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಮಾತ್ರ ಈ ಸಭೆಗಳು ಕೇವಲ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆ ಕುರಿತಾಗಿದ್ದವು ಎಂದು ಹೇಳುತ್ತಾ, ನಾಯಕತ್ವ ಬದಲಾವಣೆಯ ವರದಿಗಳನ್ನು ಕೇವಲ ‘ಊಹಾಪೋಹ’ ಎಂದು ತಳ್ಳಿಹಾಕಿದೆ.

Share

Leave a comment

Leave a Reply

Your email address will not be published. Required fields are marked *

Related Articles