Home ದಾವಣಗೆರೆ ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳ ಕಲ್ಯಾಣಕ್ಕೆ ಅಧಿಕಾರ ಸಿಕ್ಕಾಗಲೆಲ್ಲಾ ದುಡಿದಿದ್ದೇನೆ: ಸಿದ್ದರಾಮಯ್ಯ
ದಾವಣಗೆರೆನವದೆಹಲಿಬೆಂಗಳೂರು

ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳ ಕಲ್ಯಾಣಕ್ಕೆ ಅಧಿಕಾರ ಸಿಕ್ಕಾಗಲೆಲ್ಲಾ ದುಡಿದಿದ್ದೇನೆ: ಸಿದ್ದರಾಮಯ್ಯ

Share
ಸಿದ್ದರಾಮಯ್ಯ
Share

ಬೆಂಗಳೂರು: ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ ಎಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸು ವ್ಯರ್ಥಪ್ರಯತ್ನವನನ್ನು ನಾನು ಮಾಡುವುದಿಲ್ಲ., ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪತ್ರಿಕಾಕೋಷ್ಠಿಯಲ್ಲಿ ಮಾತನಾಡಿದ ಅವರು. ಜಾತಿ,ದುಡ್ಡು ಮತ್ತು ತೋಳ್ಭಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ ಎಂದು ಹೇಳಿದರು.

ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *