SUDDIKSHANA KANNADA NEWS/ DAVANAGERE/ DATE:23-11-2024
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಬಿರುಸು ಪಡೆದಿದ್ದು, ಕ್ಷಣಕ್ಷಣಕ್ಕೂ ಫಲಿತಾಂಶ ಹಾವು ಏಣಿ ಆಟದಂತಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೀಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದು, ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತಲೂ ಬರೋಬ್ಬರಿ 11,178 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷ ತಂದಿದೆ.
ನಿಖಿಲ್ ಕುಮಾರಸ್ವಾಮಿಗೆ ಹಿನ್ನೆಡೆ ಆಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರ ಮೊಗದಲ್ಲಿ ನಿರಾಸೆ ತಂದಿದೆ. ಕಾಂಗ್ರೆಸ್ ಕಾರ್ಯಕರ್ತರು ಜೈ ಜೈ ಸಿ. ಪಿ. ಯೋಗೀಶ್ವರ್, ಜೈ ಜೈ ಡಿ. ಕೆ. ಶಿವಕುಮಾರ್ ಎಂಬ ಘೋಷಣೆ ಕೂಗುತ್ತಿದ್ದರು.
ಆರಂಭದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸಿ. ಪಿ. ಯೋಗೀಶ್ವರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಹನ್ನೊಂದು ಸಾವಿರ ಮತಗಳ ಅಂತರ ಕಾಯ್ದುಕೊಂಡಿರುವುದರಿಂದ ಕಾಂಗ್ರೆಸ್ ಪಾಳೆಯದಲ್ಲಿ ಸಂತಸ ತಂದಿದೆ. ಇನ್ನು ಸಂಡೂರಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಮ್ಮ ಮುನ್ನಡೆ ಕಾಯ್ದುಕೊಂಡಿದ್ದು, ಶಿಗ್ಗಾಂವಿ ಕ್ಷೇತ್ರದಲ್ಲಿ ಯಾಸೀರ್ ಪಠಾಣ್ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಮೂರು ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಸಂತಸ ತಂದಿದ್ದರೆ, ಬಿಜೆಪಿ, ಜೆಡಿಎಸ್ ನಲ್ಲಿ ಅಂತಿಮ ಫಲಿತಾಂಶ ಏನಾಗುತ್ತದೆಯೋ ಎಂಬ ಭಯ ಶುರುವಾಗಿದೆ.