SUDDIKSHANA KANNADA NEWS/ DAVANAGERE/ DATE:23-11-2024
ಬೆಂಗಳೂರು: ಶಿಗ್ಗಾವಿ ವಿಧಾನಸಭೆ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೆ ಮತದಾರ ಶಾಕ್ ಕೊಟ್ಟಿದ್ದಾನೆ. ಬೊಮ್ಮಾಯಿ ಅವರ ಭದ್ರಕೋಟೆಯಾಗಿದ್ದ ಶಿಗ್ಗಾವಿ ಛಿದ್ರಛಿದ್ರವಾಗಿದೆ. ಭರತ್ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಭರ್ಜರಿ ಜಯ ದಾಖಲಿಸಿದ್ದರು. ಸಿದ್ದರಾಮಯ್ಯ ಅವರು ಸಿಎಂ ಆಗುತ್ತಾರೆ ಎಂಬುದು ಗೊತ್ತಿದ್ದರೂ ಶಿಗ್ಗಾವಿ ಮತದಾರರು ಬಸವರಾಜ್ ಬೊಮ್ಮಾಯಿ ಅವರನ್ನು ಗೆಲ್ಲಿಸಿದ್ದರು. ಆದ್ರೆ, ತನ್ನ ಪುತ್ರ ಭರತ್ ಬೊಮ್ಮಾಯಿಗೆ ಬಸವರಾಜ್ ಬೊಮ್ಮಾಯಿ ಎನ್ ಡಿ ಎ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಬಿ. ವೈ. ವಿಜಯೇಂದ್ರ, ಯಡಿಯೂರಪ್ಪ ಸೇರಿದಂತೆ ಘಟಾನುಘಟಿ ನಾಯಕರು ಭರತ್ ಬೊಮ್ಮಾಯಿ ಪರ ಪ್ರಚಾರ ನಡೆಸಿದ್ದರು.
ಯಾಸೀರ್ ಪಠಾಣ್ ಗೆ ಖಾದ್ರಿ ವಿರೋಧ ವ್ಯಕ್ತಪಡಿಸಿದ್ದನ್ನು ಸರಿಪಡಿಸುವಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಘಟಾನುಘಟಿಗಳು ಪ್ರಚಾರ ನಡೆಸಿದ್ದರು. ಒಟ್ಟಾರೆ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಪುತ್ರನನ್ನು ಸೋಲಿಸುವ ಮೂಲಕ ಕೈ ಪಡೆ ಕೇಕೆ ಹಾಕಿದೆ.
ಇನ್ನು ಕಾಂಗ್ರೆಸ್ ಬಾವುಟದಲ್ಲಿ ಬಿಜೆಪಿ ಬಾವುಟ ಹಾಕಿ ಬೈ ಬೈ ಬೊಮ್ಮಾಯಿ ಎಂಬುದನ್ನು ಪ್ರದರ್ಶಿಸಲಾಯಿತು. ಯಾಸೀರ್ ಪಠಾಣ್ ಗೆಲ್ಲುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಪಟ್ಟರು.