SUDDIKSHANA KANNADA NEWS/ DAVANAGERE/ DATE:23-11-2024
ಬೆಂಗಳೂರು: ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಝನೆಗಳ ಬಗ್ಗೆ ಅಪಪ್ರಚಾರ ಮಾಡುತ್ಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ ಎಂದರು.
ಎಲ್ಲಕ್ಕಿಂತಲೂ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿ್ದಾರೆ. ಈ ಎರಡೂ ಪಕ್ಷಗಳು ಕೂಡಿ ಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದರು.
ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ದವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ
ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಕಿಡಿಕಾರಿದರು.
ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು ಕಂಡಿದ್ದಾರೆ. ಬಿಜಪೆ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ. ಎರಡನೆಯದಾಗಿ ಬಿಜೆಪಿ ಮತ್ತು ಜೆಡಿಎಸ್ ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ದದ ಮತದಾರರ ೧೩೬ ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರುಮಾಡಿದ್ದರು. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ ಮಾಡಿದ್ದರು. ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ ಎಂದು ತಿಳಿಸಿದರು.
ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಮ್ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂದು ನಾನು ಭಾವಿಸಿದ್ದೇನೆ ಎಂದರು.
ಉಪಚುನಾವಣೆಗಳಲ್ಲಿ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. ಇನ್ನಾದರೂ ಅವರು ರಾಜಕೀಯ ದ್ವೇಷದ ರಾಜಕಾರಣವನ್ನು ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.
ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು? ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಗ್ಯಾರಂಟಿಗಳೇ ಜಾರಿ ಆಗಿಲ್ಲ ಎಂದು ಸುಳ್ಳು ಜಾಹಿರಾತನ್ನೇ ನೀಡಿತು ಎಂದು ಕಿಡಿಕಾರಿದರು.