Home ಕ್ರೈಂ ನ್ಯೂಸ್ ದಿಲ್ಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 20 ಮಂದಿ ಸಾವು, ಕಟ್ಟಡದಿಂದ ಜಿಗಿದ ಮಹಿಳೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ದಿಲ್ಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 20 ಮಂದಿ ಸಾವು, ಕಟ್ಟಡದಿಂದ ಜಿಗಿದ ಮಹಿಳೆ!

Share
ಅಗ್ನಿ
Share

ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಬೆಳಿಗ್ಗೆ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 20 ಜನರು ಜೀವಂತವಾಗಿ ದಹನವಾಗಿರುವ ಘಟನೆ ನಡೆದಿದೆ. ಇಲ್ಲಿನ ಪ್ರಸಿದ್ಧ ‘ಲೆಮನ್ ಗ್ರೀನ್’ (Lemon Green) ರೆಸ್ಟೋರೆಂಟ್‌ನಲ್ಲಿ ಈ ಅವಘಡ ಸಂಭವಿಸಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟೆಯ ಸುಮಾರಿಗೆ ರೆಸ್ಟೋರೆಂಟ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಜ್ವಾಲೆ ಮತ್ತು ದಟ್ಟವಾದ ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಈ ವೇಳೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಮಹಿಳೆಯೊಬ್ಬರು ಕಟ್ಟಡದ ಮೇಲಿನ ಮಹಡಿಯಿಂದ ಕೆಳಗೆ ಜಿಗಿಯುತ್ತಿರುವ ಭೀಕರ ದೃಶ್ಯ ಸಾರ್ವಜನಿಕರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ಧಾವಿಸಿದ 10 ಅಗ್ನಿಶಾಮಕ ವಾಹನಗಳು: ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ದೆಹಲಿ ಅಗ್ನಿಶಾಮಕ ದಳದ (DFS) ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ತಲಾ ಎರಡು ವಾಟರ್ ಟೆಂಡರ್ ಹಾಗೂ ವಾಟರ್ ಬೌಸರ್‌ಗಳು, ಒಂದು ಬಿಕ್ಕಟ್ಟಿನ ತುರ್ತು ವಾಹನ (QRV) ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಮೂವರ ರಕ್ಷಣೆ: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಪರಿಸ್ಥಿತಿ ಏನಾಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತಕ್ಕೆ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *