Home ದಾವಣಗೆರೆ ದಿವಂಗತ ಶಾಮನೂರು ಶಿವಶಂಕರಪ್ಪನವರ 96ನೇ ಜನ್ಮದಿನಕ್ಕೆ ಎಸ್.ಎಸ್. ಕಪ್ ಕ್ರಿಕೆಟ್ ಹಬ್ಬ: ಜೂ.9ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ 36 ತಂಡಗಳ ಸೆಣಸಾಟ
ದಾವಣಗೆರೆಕ್ರೀಡೆಬೆಂಗಳೂರು

ದಿವಂಗತ ಶಾಮನೂರು ಶಿವಶಂಕರಪ್ಪನವರ 96ನೇ ಜನ್ಮದಿನಕ್ಕೆ ಎಸ್.ಎಸ್. ಕಪ್ ಕ್ರಿಕೆಟ್ ಹಬ್ಬ: ಜೂ.9ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ 36 ತಂಡಗಳ ಸೆಣಸಾಟ

Share
ಶಾಮನೂರು ಶಿವಶಂಕರಪ್ಪ
Share

ದಾವಣಗೆರೆ: ದಿವಂಗತ ಮಾಜಿ ಸಚಿವರಾದ ಡಾ. ಶಾಮನೂರು ಶಿವಶಂಕರಪ್ಪನವರ 96ನೇ ಜನ್ಮದಿನದ ಅಂಗವಾಗಿ ಎಸ್.ಎಸ್. ಕಪ್ 2026 ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು ಹಾಗೂ ದೂಡ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ಅವರು ತಿಳಿಸಿದರು.

ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಸತತ 27ನೇ ಬಾರಿಗೆ ಈ ಟೂರ್ನಿಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜೂ.9 ರಿಂದ ಜೂನ್ 14 ರ ವರೆಗೂ ಪಂದ್ಯಾವಳಿಗಳು ನಡೆಯಲಿವೆ.

ದಿವಂಗತ ಶಾಮನೂರು ಶಿವಶಂಕರಪ್ಪನವರು ಕ್ರೀಡೆಗೆ ನೀಡಿದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಟೂರ್ನಿಯನ್ನು ಪ್ರತಿವರ್ಷ ಆಯೋಜಿಸಲಾಗುತ್ತಿದೆ. ಯುವ ಕ್ರೀಡಾಪಟುಗಳಿಗೆ ಇದು ಉತ್ತಮ ವೇದಿಕೆಯಾಗಲಿದೆ ಎಂದರು. ಟೂರ್ನಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ನೆರವೇರಿಸಲಿದ್ದು, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ದಕ್ಷಿಣ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು ಅವರು ಹಾಗೂ ಇತರೆ ಗಣ್ಯರು ಮುಖ್ಯ ಅಥಿತಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಟೂರ್ನಿಯ ಆಯೋಜಕರಾದ ಜಯಪ್ರಕಾಶ್ (ಜೆ.ಪಿ) ಅವರು ಮಾತನಾಡಿ, ದಿವಂಗತ ಡಾ. ಶಾಮನೂರು ಶಿವಶಂಕರಪ್ಪ ಅವರ ಸವಿನೆನಪಿಗಾಗಿ ಈ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲಾಗುತ್ತಿದ್ದು, ಈ ಬಾರಿಯ ಟೂರ್ನಿಯಲ್ಲಿ 36 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಪ್ರಥಮ ಬಹುಮಾನ 50 ಸಾವಿರ, ದ್ವಿತೀಯ ಬಹುಮಾನ 25 ಸಾವಿರ ಹಾಗೂ ಟೂರ್ನಿಯ ಸರಣಿ ಶ್ರೇಷ್ಠ ಬೈಸಿಕಲ್ ಪ್ರಶಸ್ತಿಗಳು ಒಳಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಕುರುಡಿ ಗಿರೀಶ್ ಸ್ವಾಮಿ, ವಿರುಪಾಕ್ಷಪ್ಪ ಸೇರಿದಂತೆ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *