Home ದಾವಣಗೆರೆ ಮನಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲಿ ಉಳಿಯುತ್ತಾರಾ?
ದಾವಣಗೆರೆನವದೆಹಲಿಬೆಂಗಳೂರು

ಮನಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲಿ ಉಳಿಯುತ್ತಾರಾ?

Share
ರಾಮಲಿಂಗಾರೆಡ್ಡಿ
Share

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಭಾರಿ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಗುರುವಾರ ತಡರಾತ್ರಿ ಸಿಎಂ ಡಿ.ಕೆ. ಶಿವಕುಮಾರ್ ಅವರು 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದರು. ಇದರಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯನ್ನು ನೀಡಲಾಗಿತ್ತು. ಆದರೆ, ತಮಗೆ ಭರವಸೆ ನೀಡಲಾಗಿದ್ದ ‘ಬೆಂಗಳೂರು ನಗರಾಭಿವೃದ್ಧಿ’ ಖಾತೆಯನ್ನು ತಪ್ಪಿಸಿ, ಜಲಸಂಪನ್ಮೂಲ ಇಲಾಖೆ ನೀಡಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನಸ್ಸಾತ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ:

ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, “ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಮಾತು ಕೊಡಲಾಗಿತ್ತು. ಆದರೆ ಈಗ ಕೊಟ್ಟ ಮಾತು ತಪ್ಪಲಾಗಿದೆ. ನನ್ನ ಮನಸ್ಸಾಕ್ಷಿಗೆ ವಿರುದ್ಧವಾಗಿ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ, ಹಾಗಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಬೇಸರ ಹೊರಹಾಕಿದ್ದಾರೆ. ಅಲ್ಲದೆ, “ಇಷ್ಟೊಂದು ಅವಮಾನವನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ನನ್ನ ಮುಂದೆ ಬೇರೆ ಯಾವ ಆಯ್ಕೆಯೂ ಇರಲಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಂಗ್ರೆಸ್‌ನಲ್ಲೇ ಉಳಿಯಲಿರುವ ರೆಡ್ಡಿ:

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ತಾವು ಪಕ್ಷ ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ನಾನು ಶಾಸಕನಾಗಿ ಮುಂದುವರಿಯುತ್ತೇನೆ ಮತ್ತು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ” ಎಂದು ಹೇಳುವ ಮೂಲಕ ತಮ್ಮ ಅಸಮಾಧಾನ ಕೇವಲ ಖಾತೆ ಹಂಚಿಕೆಗೆ ಮಾತ್ರ ಸೀಮಿತವಾಗಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಗುರುವಾರ ನಡೆದ ಸಂಪುಟ ಸಭೆಯಲ್ಲೇ ರಾಮಲಿಂಗಾರೆಡ್ಡಿ ಅವರು ತಮಗೆ 2023 ರಲ್ಲಿ ನೀಡಲಾಗಿದ್ದ ಭರವಸೆಯನ್ನು ಮುಖ್ಯಮಂತ್ರಿಗಳಿಗೆ ನೆನಪಿಸಿದ್ದರು ಎನ್ನಲಾಗಿದೆ. ಆದರೂ ಖಾತೆ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡು ಸಭೆಯಿಂದ ಹೊರನಡೆದಿದ್ದರು. ಸದ್ಯ ರಾಮಲಿಂಗಾರೆಡ್ಡಿ ಅವರ ಈ ಹಠಾತ್ ನಡೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ರಾಜಕೀಯ ಬಿರುಗಾಳಿ ಎಬ್ಬಿಸಿದೆ

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles