Home ದಾವಣಗೆರೆ ಭಾರತ ಟಿ20 ತಂಡ ಪ್ರಕಟ: ಶ್ರೇಯಸ್ ಅಯ್ಯರ್ ನೂತನ ನಾಯಕ, ಐಪಿಎಲ್ ಹೀರೋಗಳಾದ ವೈಭವ್ ಸೂರ್ಯವಂಶಿ, ಪ್ರಿನ್ಸ್ ಯಾದವ್‌ಗೆ ಭಾರತ ತಂಡದಲ್ಲಿ ಚೊಚ್ಚಲ ಅವಕಾಶ!
ದಾವಣಗೆರೆಕ್ರೀಡೆನವದೆಹಲಿಬೆಂಗಳೂರು

ಭಾರತ ಟಿ20 ತಂಡ ಪ್ರಕಟ: ಶ್ರೇಯಸ್ ಅಯ್ಯರ್ ನೂತನ ನಾಯಕ, ಐಪಿಎಲ್ ಹೀರೋಗಳಾದ ವೈಭವ್ ಸೂರ್ಯವಂಶಿ, ಪ್ರಿನ್ಸ್ ಯಾದವ್‌ಗೆ ಭಾರತ ತಂಡದಲ್ಲಿ ಚೊಚ್ಚಲ ಅವಕಾಶ!

Share
ಭಾರತ
Share

ಮುಂಬೈ: ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸ ಮತ್ತು ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಟೂರ್ನಿಗಾಗಿ ಬಿಸಿಸಿಐ (BCCI) ಶನಿವಾರ ಭಾರತ ಟಿ20 ತಂಡವನ್ನು ಪ್ರಕಟಿಸಿದೆ. ಮುಂದಿನ ಎರಡು ವರ್ಷಗಳ ಟಿ20 ಸೈಕಲ್ ಅನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿ ಭಾರಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಶ್ರೇಯಸ್ ಅಯ್ಯರ್ ಹೊಸ ಕ್ಯಾಪ್ಟನ್; ತಿಲಕ್ ವರ್ಮಾಗೆ ಉಪನಾಯಕ ಪಟ್ಟ:

ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಐಪಿಎಲ್ ಹಾಗೂ ದೇಶಿ ಕ್ರಿಕೆಟ್‌ನಲ್ಲಿ ಶ್ರೇಯಸ್ ಅವರ ನಾಯಕತ್ವದ ಅನುಭವವನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ತಿಳಿಸಿದ್ದಾರೆ.

ಸೂರ್ಯಕುಮಾರ್ ಯಾದವ್‌ಗೆ ಶಾಕ್!

ಕಳಪೆ ಫಾರ್ಮ್ ಹಾಗೂ ಭವಿಷ್ಯದ ದೀರ್ಘಾವಧಿ ಯೋಜನೆಯ ಭಾಗವಾಗಿ ಮಾಜಿ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸುವುದಷ್ಟೇ ಅಲ್ಲದೆ, ಇಡೀ ಟಿ20 ತಂಡದಿಂದಲೇ ಸಂಪೂರ್ಣವಾಗಿ ಕೈಬಿಡಲಾಗಿದೆ. ಇದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ವೈಭವ್ ಸೂರ್ಯವಂಶಿ, ಪ್ರಿನ್ಸ್ ಯಾದವ್‌ಗೆ ಚೊಚ್ಚಲ ಅವಕಾಶ:

ಇತ್ತೀಚಿನ ಐಪಿಎಲ್ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 772 ರನ್ ಗಳಿಸಿ, ಆರೆಂಜ್ ಕ್ಯಾಪ್ ಹಾಗೂ 62 ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದ್ದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಡೆಲ್ಲಿ ಪರ 14 ಪಂದ್ಯಗಳಲ್ಲಿ 16 ವಿಕೆಟ್ ಕಿತ್ತು ಮಿಂಚಿದ್ದ ವೇಗಿ ಪ್ರಿನ್ಸ್ ಯಾದವ್ ಕೂಡ ಮೊದಲ ಬಾರಿಗೆ ಟೀಮ್ ಇಂಡಿಯಾ ಜರ್ಸಿ ಧರಿಸಲಿದ್ದಾರೆ.

ಏಷ್ಯನ್ ಗೇಮ್ಸ್‌ಗೆ ಬುಮ್ರಾ ಅಸ್ತ್ರ:

ಸೆಪ್ಟೆಂಬರ್‌ನಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ 2026 ಟೂರ್ನಿಗಾಗಿ ಬಿಸಿಸಿಐ ಬಲಿಷ್ಠ ತಂಡವನ್ನು ಪ್ರಕಟಿಸಿದ್ದು, ಹಿರಿಯ ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮಹತ್ವದ ಟೂರ್ನಿಯಲ್ಲೂ ಶ್ರೇಯಸ್ ಅಯ್ಯರ್ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles