Home ದಾವಣಗೆರೆ ದಾವಣಗೆರೆ ಜನತೆಗೆ ಸುವಾರ್ತೆ: ಆಶ್ರಯ ಯೋಜನೆಯಡಿ ಉಚಿತ ನಿವೇಶನ, ಮನೆಗೆ ಅರ್ಜಿ ಅವಧಿ ವಿಸ್ತರಣೆ; ಯಾರಿಗೆಲ್ಲ ಸಿಗಲಿದೆ ಲಾಭ?
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆ ಜನತೆಗೆ ಸುವಾರ್ತೆ: ಆಶ್ರಯ ಯೋಜನೆಯಡಿ ಉಚಿತ ನಿವೇಶನ, ಮನೆಗೆ ಅರ್ಜಿ ಅವಧಿ ವಿಸ್ತರಣೆ; ಯಾರಿಗೆಲ್ಲ ಸಿಗಲಿದೆ ಲಾಭ?

Share
ದಾವಣಗೆರೆ
Share

ದಾವಣಗೆರೆ: ನಗರದ ನಿವೇಶನ ಮತ್ತು ವಸತಿ ರಹಿತ ಸಾರ್ವಜನಿಕರಿಗೆ ದಾವಣಗೆರೆ ಮಹಾನಗರ ಪಾಲಿಕೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ.

2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಡಾ. ಮಹಾಂತೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ವಸತಿ ರಹಿತರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಯಾರಿಗೆಲ್ಲ ಸಿಗಲಿದೆ ಈ ಯೋಜನೆಯ ಲಾಭ?

ಈ ಕೆಳಗಿನ ವರ್ಗದ ಅರ್ಹ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ:

ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು.

ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದವರು.

ಸ್ವಚ್ಛತಾ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರು.

PM SVanidhi ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಹಾಗೂ ಪಿಎಂ ವಿಶ್ವಕರ್ಮ ಯೋಜನೆಯ ಕುಶಲಕರ್ಮಿಗಳು.

ವಲಸೆ ಬಂದ ಕುಟುಂಬಗಳು.

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ವಿಧಾನ: ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್‌ಸೈಟ್ ಆದ http://pmayurban.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಆಫ್‌ಲೈನ್ ವಿಧಾನ: ಸಾರ್ವಜನಿಕರು ಖುದ್ದಾಗಿ ದಾವಣಗೆರೆ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿ ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *