Home ದಾವಣಗೆರೆ ಡಿಕೆಶಿ ಸಂಪುಟದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್‌, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ನೀಡಿ: ಸೈಯದ್ ಖಾಲಿದ್ ಅಹ್ಮದ್ ಆಗ್ರಹ
ದಾವಣಗೆರೆನವದೆಹಲಿಬೆಂಗಳೂರು

ಡಿಕೆಶಿ ಸಂಪುಟದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್‌, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ನೀಡಿ: ಸೈಯದ್ ಖಾಲಿದ್ ಅಹ್ಮದ್ ಆಗ್ರಹ

Share
ಸಂಪುಟ
Share

ದಾವಣಗೆರೆ: ದಾವಣಗೆರೆಯ ಅಭಿವೃದ್ಧಿಗೆ ಶ್ರಮಿಸಿರುವ ಮತ್ತು ಶ್ರಮಿಸುತ್ತಿರುವ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿರುವ ಸಲೀಂ ಅಹ್ಮದ್ ಅವರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.

ಎಸ್‌ಎಸ್‌ ಮಲ್ಲಿಕಾರ್ಜುನ್‌ಗೆ ಡಿಸಿಎಂ ಸ್ಥಾನ ನೀಡಿ

ದಾವಣಗೆರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿರಲು ಕಾರಣಕರ್ತರಾಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಡಿ. ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ವೇಳೆಯೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ, ಕಾರಣಾಂತರಗಳಿಂದ ನೀಡಿಲ್ಲ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷವು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಜೊತೆಗೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಮೂರು ಬಾರಿ ಸಚಿವರಾಗಿ ಹಲವು ಅಭಿವೃದ್ಧಿ ಕಾರ್ಯಗಳು, ಯೋಜನೆಗಳನ್ನು ತಂದಿರುವ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ದಾವಣಗೆರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿದ್ದಾರೆ, ರಸ್ತೆ ಅಗಲೀಕರಣ, ಕುಂದುವಾಡ ಕೆರೆ ಅಭಿವೃದ್ಧಿ, ನೀರಾವರಿ ಯೋಜನೆಗಳು ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ, ಮಲ್ಲಿಕಾರ್ಜುನ್ ಅವರ ಹಿರಿತನ ಮತ್ತು ಅಭಿವೃದ್ಧಿ ಕಾರ್ಯಗಳು, ಪಕ್ಷ ನಿಷ್ಠೆ ಪರಿಗಣಿಸಿ ಸಚಿವ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನವನ್ನೂ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಿಸ್ವಾರ್ಥ ನಾಯಕ ಸಲೀಂ ಅಹ್ಮದ್‌ಗೆ ಸಿಗಲಿ ಸಚಿವ ಸ್ಥಾನ

2023ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯವನ್ನು ಸುತ್ತಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದ್ದರು. ಆಗ ಕಾರ್ಯಾಧ್ಯಕ್ಷ ಆದವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಬಾರಿ ಅವರ ಪಕ್ಷ ಸೇವೆ, ನಿಷ್ಠೆ ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಸಲೀಂ ಅಹ್ಮದ್ ಅವರು ಕಳೆದ ನಾಲ್ಕು ದಶಕಗಳಿಂದಲೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದಾರೆ. ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗೆ ಶ್ರಮಿಸಿದ್ದಾರೆ. ವಿರೋಧದ ನಡುವೆಯೂ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸಿದ್ದರಲ್ಲದೇ, ಸಮರ್ಥ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಧಿಕಾರಕ್ಕೆ ಎಂದಿಗೂ ಆಸೆ ಪಡೆದೇ ಪಕ್ಷದ ಸೂಚನೆಯಂತೆ ಕಾರ್ಯನಿರ್ವಹಿಸಿರುವ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles