Home ದಾವಣಗೆರೆ ನಿರುದ್ಯೋಗಿ ಯುವಕ, ಯುವತಿಯರಿಗೆ ಸುವರ್ಣಾವಕಾಶ: ರುಡ್‌ಸೆಟ್‌ನಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರುವಾಣಿಜ್ಯ

ನಿರುದ್ಯೋಗಿ ಯುವಕ, ಯುವತಿಯರಿಗೆ ಸುವರ್ಣಾವಕಾಶ: ರುಡ್‌ಸೆಟ್‌ನಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Share
ಕೋಳಿ
Share

ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುವಂಥ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. 

ಈ ತರಬೇತಿಯು ದಿನಾಂಕ 06 ಜುಲೈ 2026 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರು ಈ ಉಚಿತ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಅರ್ಹತೆ ಮತ್ತು ಆದ್ಯತೆಗಳು:

ವಯೋಮಿತಿ: ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು.

ಭಾಷೆ: ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.

ಆದ್ಯತೆ: ಗ್ರಾಮೀಣ ಪ್ರದೇಶದ ಬಿಪಿಎಲ್ (BPL) ರೇಷನ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು.ಕನ್ನಡ ಭಾಷೆ ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು.ಗ್ರಾಮೀಣ ಪ್ರದೇಶದ ಬಿಪಿಎಲ್ (BPL) ಕಾರ್ಡ್ ಹೊಂದಿರುವವರಿಗೆ ವಿಶೇಷ ಆದ್ಯತೆ ನೀಡಲಾಗುವುದು. ತರಬೇತಿಗೆ ಅರ್ಜಿ ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಬಹುದು. 

ಅಥವಾ ಮೊಬೈಲ್ ಸಂಖ್ಯೆಗಳು: 9241482541, 9481506564,9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *