ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026- 27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿಗಳು, ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ ಹಾಗೂ ನೀರಿನ ಸಮರ್ಥ ಬಳಕೆ ಸೇರಿದಂತೆ ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಮತ್ತು ಆತ್ಮ ಯೋಜನೆಯಡಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಹಾಗೂ ಆಡು, ಕುರಿ, ಮೊಲ ಇತ್ಯಾದಿ ಸಾಕಣಿಕೆ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ರೈತರು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಜೂನ್ 29 ರ ಕೊನೆಯ ದಿನಾಂಕದೊಳಗೆ ಸಲ್ಲಿಸಬಹುದು.
ಪ್ರಶಸ್ತಿಗಳ ಕುರಿತು ಹೆಚ್ಚಿನ ವಿವರ ಹಾಗೂ ಅರ್ಜಿ ನಮೂನೆಗಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಅಥವಾ ಆಯಾ ಭಾಗದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ಹಾಗೂ ಆತ್ಮ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Agriculture Awards Application
- ATMA Scheme Karnataka
- Davanagere Agriculture Department
- Davanagere Farmers News
- Farmer Registration Karnataka
- Horticulture and Dairy Farming Awards
- Integrated Farming System Davanagere
- Joint Director of Agriculture Davanagere
- Krishi Pandita Award 2026
- Last Date June 29
- Organic Farming Awards
- Raita Samparka Kendra
- Scientific Agriculture Equipment
- Shrestha Krishika Prashasti
- Women Farmers Award
- ಆತ್ಮ ಯೋಜನೆ
- ಕೃಷಿ ಪಂಡಿತ ಪ್ರಶಸ್ತಿ
- ಕೃಷಿ ಪ್ರಶಸ್ತಿ ಅರ್ಜಿ
- ಕೃಷಿ ಪ್ರಶಸ್ತಿಗಳು 2026
- ಕೃಷಿ ಯಂತ್ರೋಪಕರಣ
- ಜಂಟಿ ಕೃಷಿ ನಿರ್ದೇಶಕರು ದಾವಣಗೆರೆ
- ಜೂನ್ 29 ಕೊನೆಯ ದಿನಾಂಕ
- ದಾವಣಗೆರೆ ಕೃಷಿ ಇಲಾಖೆ
- ದಾವಣಗೆರೆ ರೈತರು
- ರೈತ ಸಂಪರ್ಕ ಕೇಂದ್ರ
- ಶ್ರೇಷ್ಠ ಕೃಷಿಕ ಪ್ರಶಸ್ತಿ
- ಸಮಗ್ರ ಕೃಷಿ ಪದ್ಧತಿ
- ಸಾಧಕ ರೈತ ಮಹಿಳೆ
- ಸಾವಯವ ಕೃಷಿ
- ಹೈನುಗಾರಿಕೆ ಮತ್ತು ತೋಟಗಾರಿಕೆ





Leave a comment