Home ದಾವಣಗೆರೆ ಏಕಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ; 4 ಬಗೆಯಲ್ಲಿ ಕಸ ವಿಂಗಡಿಸದಿದ್ದರೆ ಕಠಿಣ ಕ್ರಮ: ದಾವಣಗೆರೆ ಡಿಸಿ ಎಚ್ಚರಿಕೆ
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ಏಕಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ; 4 ಬಗೆಯಲ್ಲಿ ಕಸ ವಿಂಗಡಿಸದಿದ್ದರೆ ಕಠಿಣ ಕ್ರಮ: ದಾವಣಗೆರೆ ಡಿಸಿ ಎಚ್ಚರಿಕೆ

Share
ದಾವಣಗೆರೆ
Share

ದಾವಣಗೆರೆ : ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026ರ ಅನುಷ್ಠಾನದ ಹಿನ್ನೆಲೆಯಲ್ಲಿ, ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೃಹತ್ ತ್ಯಾಜ್ಯ ಉತ್ಪಾದಕರ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇತ್ತೀಜಿಗೆ ಆಯೋಜಿಸಲಾಗಿತ್ತು.

ನಗರದಲ್ಲಿನ ಬೃಹತ್ ತ್ಯಾಜ್ಯ ಉತ್ಪಾದಕರು ಸೇರಿದಂತೆ ಎಲ್ಲಾ ತರಹದ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯವನ್ನು ಮೂಲದಲ್ಲಿಯೇ ಕಡ್ಡಾಯವಾಗಿ ಹಸಿ ಕಸ, ಒಣ ಕಸ, ಸ್ಯಾನಿಟರಿ ಕಸ ಹಾಗೂ ವಿಶೇಷ ಆರೈಕೆ ತ್ಯಾಜ್ಯಗಳೆಂದು ಮೂಲದಲ್ಲಿಯೇ ಪ್ರತ್ಯೇಕಿಸಬೇಕು. ಗುರುತಿಸಲಾದ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ತಮ್ಮ ಆವರಣದಲ್ಲಿಯೇ ಬಯೋಮೇಥನೇಷನ್ ಅಥವಾ ಗೊಬ್ಬರವನ್ನಾಗಿ ಕಡ್ಡಾಯವಾಗಿ ಸಂಸ್ಕರಿಸಬೇಕು.

ಒಣಕಸ, ಸ್ಯಾನಿಟರಿ ಕಸ ಹಾಗೂ ವಿಶೇಷ ಆರೈಕೆ ತ್ಯಾಜ್ಯಗಳನ್ನು ಮಹಾನಗರ ಪಾಲಿಕೆಯ ಅಧಿಕೃತ ತ್ಯಾಜ್ಯ ಸಂಗ್ರಾಹಕರಿಗೆ ಮಾತ್ರ ಹಸ್ತಾಂತರಿಸಬೇಕು.

ನಿಯಮಗಳ ಅನುಷ್ಠಾನವನ್ನು ಸರ್ವೋಚ್ಚ ನ್ಯಾಯಾಲಯವು ಮೇಲ್ವಿಚಾರಣೆ ಮಾಡುತ್ತಿದೆ. ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಉದ್ದಿಮೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತಹ ಉದ್ದಿಮೆಗಳನ್ನು ಸ್ಥಗಿತಗೊಳಿಸುವ ಅಥವಾ ಅವುಗಳ ವಿದ್ಯುತ್ ಮತ್ತು ನೀರು ಸಂಪರ್ಕವನ್ನು ಕಡಿತಗೊಳಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳು ಹೊಂದಿರುತ್ತಾರೆ.

ನಮ್ಮ ಭವಿಷ್ಯದ ಉಳಿವಿಗಾಗಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಯಾರೂ ಸಹ ತ್ಯಾಜ್ಯವನ್ನು ರಸ್ತೆ, ಚರಂಡಿ ಹಾಗೂ ಖಾಲಿ ನಿವೇಶನಗಳಲ್ಲಿ ಎಸೆಯಬಾರದು. ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಪೌರಕಾರ್ಮಿಕರ ಘನತೆಗೆ ಧಕ್ಕೆ ಬಾರದಂತೆ ಮಾನವೀಯತೆಯಿಂದ ನಡೆದುಕೊಂಡು, ಪರಿಸರಕ್ಕೆ ಮಾರಕವಾಗಿರುವ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ನಗರದ ಸ್ವಚ್ಛತೆಯಲ್ಲಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಮತ್ತು ಉದ್ದಿಮೆದಾರರು ಸಕ್ರಿಯವಾಗಿ ಸಹಕರಿಸಬೇಕಾಗಿ ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.