ದಾವಣಗೆರೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೊದಲನೆಯ ವಾರದಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜೂನ್ 22 ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8970476050, 6363139123, 9886935603, 9591514154, 9686248369 ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
- Animal husbandry training
- Canara Bank RSETI Hoskote
- Free food and accommodation training
- Free self employment training Karnataka
- Free sheep farming training
- Govt certified courses for unemployed.
- ಉಚಿತ ವಸತಿ ತರಬೇತಿ
- ಉಚಿತ ಸ್ವಉದ್ಯೋಗ ತರಬೇತಿ
- ಕುರಿ ಸಾಕಾಣಿಕೆ ತರಬೇತಿ
- ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆ ಹೊಸಕೋಟೆ
- ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ
- ಪಶುಸಂಗೋಪನೆ ತರಬೇತಿ ಕರ್ನಾಟಕ
- ಬೆಂಗಳೂರು ಗ್ರಾಮಾಂತರ ಸುದ್ದಿ.





Leave a comment