Home ದಾವಣಗೆರೆ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಜೂನ್ 30ರೊಳಗೆ ಅರ್ಜಿ ಸಲ್ಲಿಸಿ
ದಾವಣಗೆರೆಬೆಂಗಳೂರು

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

Share
ಡಿಪ್ಲೊಮಾ
Share

ದಾವಣಗೆರೆ:  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲರ್ಬುಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸಲಾಗುವುದು. ಈ ತರಬೇತಿ ಜುಲೈ-2026ರ ಮಾಹೆಯಲ್ಲಿ ಪ್ರಾರಂಭಿಸಲಾಗಲಾಗುವುದು. ತರಬೇತಿಗೆ ಅರ್ಜಿ ಸಲ್ಲಿಸಲು ಜೂನ್ 30 ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು /180 ದಿನಗಳ ವಿಶೇಷ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು 2026 ರ ಜುಲೈ ಮಾಹೆರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು ಮೀರಿರಬಾರದು. ಸದರಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 600/- ಶಿಷ್ಯವೇತನವನ್ನು ನೀಡಲಾಗುವುದು.

ಡಿ.ಸಿ.ಎಂ ತರಬೇತಿಯ ಅರ್ಜಿಯನ್ನು ಮತ್ತು ವಿವರಣಾ ಪುಸ್ತಕವನ್ನು ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ., #2532, “ಕಲಾಪ್ರಕಾಶ ವೃಂದ”, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್, ದಾವಣಗೆರೆ ಈ ಸಂಸ್ಥೆಯಿAದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ. 100/- (ರೂಪಾಯಿ ಒಂದು ನೂರು ಮಾತ್ರ) ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಚಿಸುವವರು ರೂ. 125/- (ರೂಪಾಯಿ ಒಂದು ನೂರ ಇಪ್ಪತ್ತೈದು ಮಾತ್ರ) ಗಳ ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದೆಂದು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೈಲಜಾ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *