Home ದಾವಣಗೆರೆ ವಾತಾವರಣದಲ್ಲಿ ಭಾರಿ ಏರುಪೇರು: ಒಂದೆಡೆ ವರುಣನ ಆರ್ಭಟ, ಮತ್ತೊಂದೆಡೆ ಸೂರ್ಯನ ಪ್ರತಾಪ! ಐಎಂಡಿ ಎಚ್ಚರಿಕೆ ಏನು?
ದಾವಣಗೆರೆನವದೆಹಲಿಬೆಂಗಳೂರು

ವಾತಾವರಣದಲ್ಲಿ ಭಾರಿ ಏರುಪೇರು: ಒಂದೆಡೆ ವರುಣನ ಆರ್ಭಟ, ಮತ್ತೊಂದೆಡೆ ಸೂರ್ಯನ ಪ್ರತಾಪ! ಐಎಂಡಿ ಎಚ್ಚರಿಕೆ ಏನು?

Share
ವರುಣ
Share

ನವದೆಹಲಿ: ದೇಶದಲ್ಲಿ ನೈಋತ್ಯ ಮುಂಗಾರು (Southwest Monsoon) ದಿನದಿಂದ ದಿನಕ್ಕೆ ಚುರುಕಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 6 ರಿಂದ 7 ದಿನಗಳ ಕಾಲ ದೇಶದ ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ವರುಣ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ. ಇದೇ ವೇಳೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಬಿಸಿಗಾಳಿಯ (Heatwave) ತೀವ್ರತೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.

ಮುಂಗಾರು ಪಯಣ:

ಜೂನ್ 4 ರಂದು ಕೇರಳ ಪ್ರವೇಶಿಸಿದ ಮುಂಗಾರು ಈಗಾಗಲೇ ತಮಿಳುನಾಡು, ಕರ್ನಾಟಕದ ಬಹುತೇಕ ಭಾಗಗಳು, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಬಿಹಾರ ಸೇರಿದಂತೆ ಈಶಾನ್ಯ ರಾಜ್ಯಗಳನ್ನು ಸಂಪೂರ್ಣವಾಗಿ ಆವರಿಸಿದೆ. ಮುಂದಿನ 4-5 ದಿನಗಳಲ್ಲಿ ಮಹಾರಾಷ್ಟ್ರದ ಉಳಿದ ಭಾಗಗಳು, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಹಾಗೂ ಛತ್ತೀಸ್‌ಗಢಕ್ಕೂ ಮುಂಗಾರು ವಿಸ್ತರಣೆಯಾಗಲು ಪೂರಕ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕಕ್ಕೂ ಮಳೆ ಮುನ್ಸೂಚನೆ:

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಬಿಸಿಗಾಳಿಯ ಆತಂಕ:

ಒಂದೆಡೆ ಮಳೆಯ ಆರ್ಭಟವಿದ್ದರೆ, ಮತ್ತೊಂದೆಡೆ ಮಹಾರಾಷ್ಟ್ರದ ವಿದರ್ಭ ಮತ್ತು ಮರಾಠವಾಡ ಪ್ರದೇಶಗಳಲ್ಲಿ ಮುಂದಿನ 3-4 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ. ಮುಂಬೈ ಹಾಗೂ ಕೊಂಕಣ ಭಾಗದಲ್ಲಿ ಉಷ್ಣಾಂಶ ಹೆಚ್ಚಾಗಲಿದ್ದು, ಸೆಕೆಯಿಂದ ಕೂಡಿದ ಹವಾಮಾನ ಇರಲಿದೆ. ಜೂನ್ 19ರ ಬಳಿಕವಷ್ಟೇ ಇಲ್ಲಿ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆಯಿದೆ. ಜೂನ್ 13 ರಂದು ಗುಜರಾತ್‌ನ ಭಾವನಗರದಲ್ಲಿ ದೇಶದ ಗರಿಷ್ಠ ತಾಪಮಾನ 41.9°C ದಾಖಲಾಗಿದೆ.

ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚನೆ:

ಮುಂಗಾರು ತೀವ್ರತೆಯಿಂದಾಗಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ, ಜೂನ್ 19 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಐಎಂಡಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದೆ.

Share

Leave a comment

Leave a Reply

Your email address will not be published. Required fields are marked *

Related Articles