Home ಕ್ರೈಂ ನ್ಯೂಸ್ ದಾವಣಗೆರೆಯ ಹರಿಹರದಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕಿಸ್ತಾನ ಸಂಘಟನೆಯೊಂದಿಗೆ ಲಿಂಕ್!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ದಾವಣಗೆರೆಯ ಹರಿಹರದಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕಿಸ್ತಾನ ಸಂಘಟನೆಯೊಂದಿಗೆ ಲಿಂಕ್!

Share
ದಾವಣಗೆರೆ
Share

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಭದ್ರತೆಗೆ ಆತಂಕ ತಂದೊಡ್ಡುವ ಘಟನೆ ಬೆಳಕಿಗೆ ಬಂದಿದ್ದು, ಹರಿಹರದಲ್ಲಿ ಪಾಕಿಸ್ತಾನದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಯಾರು ಈ ಶಂಕಿತ ಉಗ್ರ?

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ 20 ವರ್ಷದ ಯುವಕ ಸುಹೇಲ್ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ಸಮಯದಿಂದ ಹರಿಹರದ ಖಾಸಗಿ ಕಾರ್ಖಾನೆಯೊಂದರಲ್ಲಿ ಸಾಮಾನ್ಯ ಕಾರ್ಮಿಕನಂತೆ ಕೆಲಸ ಮಾಡಿಕೊಂಡಿದ್ದನು. ಆದರೆ ಒಳಗೊಳಗೆ ಈತ ದೇಶವಿರೋಧಿ ಕೃತ್ಯಗಳಿಗೆ ಹಾಗೂ ಪಾಕ್ ಮೂಲದ ಉಗ್ರರೊಂದಿಗೆ ಜಾಲ ಹೊಂದಿದ್ದ ಎನ್ನಲಾಗಿದೆ.

ಜಂಟಿ ಕಾರ್ಯಾಚರಣೆ:

ಕೇಂದ್ರ ಗುಪ್ತಚರ ಇಲಾಖೆ (Central Intelligence) ನೀಡಿದ ಖಚಿತ ಮಾಹಿತಿ ಮೇರೆಗೆ ಹರಿಹರ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ವಿಶೇಷ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದೆ.

ಹಳೇ ಪ್ರಕರಣದ ಲಿಂಕ್:

ಪೊಲೀಸ್ ಮೂಲಗಳ ಪ್ರಕಾರ, ಈ ಹಿಂದೆ ಬಂಧನಕ್ಕೊಳಗಾಗಿದ್ದ ದಾವಣಗೆರೆ ಮೂಲದ ಜಮೀರ್ ಖಾನ್ ಮತ್ತು ತುಮಕೂರಿನ ಅಲ್ಲಾಭಕ್ಷಿ ಎಂಬುವವರ ಜೊತೆ ಸುಹೇಲ್ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಹಳೆಯ ಪ್ರಕರಣಗಳ ತನಿಖೆಯನ್ನು ತೀವ್ರಗೊಳಿಸಿದ ಸಂದರ್ಭದಲ್ಲಿ ಸುಹೇಲ್ ಹೆಸರು ಮುಂಚೂಣಿಗೆ ಬಂದಿದ್ದು, ತಕ್ಷಣವೇ ಪೊಲೀಸರು ಈತನನ್ನು ಜಾಲಕ್ಕೆ ಕೆಡವಿದ್ದಾರೆ. ಸದ್ಯ ಆರೋಪಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Share

Leave a comment

Leave a Reply

Your email address will not be published. Required fields are marked *