Home ದಾವಣಗೆರೆ ನವದೆಹಲಿಯಲ್ಲಿ ರೈತರ ಪರ ಧ್ವನಿ ಎತ್ತಿದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್!
ದಾವಣಗೆರೆನವದೆಹಲಿಬೆಂಗಳೂರು

ನವದೆಹಲಿಯಲ್ಲಿ ರೈತರ ಪರ ಧ್ವನಿ ಎತ್ತಿದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್!

Share
ಪ್ರಭಾ ಮಲ್ಲಿಕಾರ್ಜುನ್
Share

ದಾವಣಗೆರೆ/ನವದೆಹಲಿ: ನವದೆಹಲಿಯ ಸಂಸತ್ ಭವನದ ಸಭಾಂಗಣದಲ್ಲಿ ನಡೆದ ಸಂಸತ್ತಿನ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ರೈತರು ದೇಶದ ಬೆನ್ನೆಲುಬಾಗಿರುವ ‘ಅನ್ನದಾತರು’ ಎಂಬುದನ್ನು ಉಲ್ಲೇಖಿಸಿ, ಕೃಷಿ ಕ್ಷೇತ್ರದ ಪ್ರಗತಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳು ಮತ್ತು ಸರ್ಕಾರದ ಭರವಸೆಗಳ ಪರಿಣಾಮಕಾರಿ ಅನುಷ್ಠಾನದ ಅಗತ್ಯತೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಸಾಯನಿಕ ರಸಗೊಬ್ಬರಗಳಿಗೆ ಸಂಬಂಧಿಸಿದಂತೆ ರಸಗೊಬ್ಬರಗಳು ಹಾಗೂ ಕೀಟನಾಶಕಗಳ ಲಭ್ಯತೆ ಮತ್ತು ವಿತರಣೆ, ಪೊಟಾಶ್ ದರಗಳು, ಮಣ್ಣಿನ ಆರೋಗ್ಯ ಪರೀಕ್ಷಾ ಕಾರ್ಡ್‌ಗಳ ವಿತರಣೆ, ನ್ಯಾನೋ ರಸಗೊಬ್ಬರಗಳ ಪರಿಣಾಮಕಾರಿತ್ವ, ರಸಗೊಬ್ಬರ ಉತ್ಪಾದನಾ ಕಂಪನಿಗಳ ಸಂಖ್ಯೆ ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಇದೇ ವೇಳೆ, ಈ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡಿರುವ ಬಾಕಿ ಉಳಿದಿರುವ ಭರವಸೆಗಳ ಅನುಷ್ಠಾನ ಸ್ಥಿತಿಯನ್ನು ಸಮಿತಿ ಪರಿಶೀಲಿಸಿತು. ರೈತರಿಗೆ ಅಗತ್ಯವಾದ ರಸಗೊಬ್ಬರಗಳ ಸಮರ್ಪಕ ಪೂರೈಕೆಯನ್ನು ಖಚಿತಪಡಿಸುವುದು, ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು ಹಾಗೂ ರೈತಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸದಸ್ಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.

ಸರ್ಕಾರದ ಭರವಸೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ಆಗಿರುವ ಪ್ರಗತಿ ಹಾಗೂ ಅವುಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವ ಉದ್ದೇಶದಿಂದ ಸಭೆಯಲ್ಲಿ ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

Share

Leave a comment

Leave a Reply

Your email address will not be published. Required fields are marked *