SUDDIKSHANA KANNADA NEWS/ DAVANAGERE/ DATE:13-12-2024
ದಾವಣಗೆರೆ: ನಮಗೆ ನ್ಯಾಯ ಸಿಕ್ಕೇ ಸಿಗುತ್ತೆ. ಕೊಲೆ ಅಪರಾಧಿಗಳಿಗೆ ಜಾಮೀನು ಮಂಜೂರು ಆಗಿದೆ ಎಂಬುದು ತಿಳಿದಿದೆ. ಏನಾಗಿದೆ ಎಂಬುದು ಗೊತ್ತಿಲ್ಲ. ನ್ಯಾಯಾಲಯದಲ್ಲಿ ಮೇಲೆ ಸಂಪೂರ್ಮ ನಂಬಿಕೆ ಇದೆ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡರ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ತಾತ್ಕಾಲಿಕ ಜಾಮೀನು ಮಂಜೂರಾಗಿರಬಹುದು. ಕಾನೂನು ಹಾಗೂ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ಇದೆ. ಇನ್ನೂ ವಿಚಾರಣೆ ಮುಗಿಯಬೇಕು. ಆ ಬಳಿಕ ತೀರ್ಪು ಹೊರ ಬೀಳಲಿದೆ. ಅಂತಿಮ ತೀರ್ಪು ನಮ್ಮ ಪರವಾಗಿ ಬರಲಿದೆ ಎಂದು ಹೇಳಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ನಿಮ್ಮ ಮನೆಗೆ ಬಂದು ಭೇಟಿ ಮಾಡಿದರೆ ಮಾತುಕತೆ ನಡೆಸುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮಗನೇ ಹೋಗಿದ್ದಾನೆ. ಅವನು ವಾಪಸ್ ಬರುತ್ತಾನಾ?
ಇಲ್ಲವಲ್ಲ. ಯಾರು ಬಂದು ಏನು ಮಾಡಿದರೇನು? ನಮಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.