Home ಇಸ್ಲಾಂ ಧರ್ಮಕ್ಕೆ ಮತಾಂತರದ ನಂತರ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು!
Homeಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಇಸ್ಲಾಂ ಧರ್ಮಕ್ಕೆ ಮತಾಂತರದ ನಂತರ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು!

Share
ಇಸ್ಲಾಂ
Share

ಮುಂಬೈ: ಮೂಲತಃ ಪರಿಶಿಷ್ಟ ಜಾತಿಗೆ (SC) ಸೇರಿದ ವ್ಯಕ್ತಿಯೊಬ್ಬರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಮೊಕದ್ದಮೆ ಹೂಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ಕೊಲ್ಹಾಪುರ ಪೀಠ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:

ಹಿಂದೂ ಮಹಾರ್ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು 2011ರಲ್ಲಿ ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಹೆಸರು ಬದಲಾಯಿಸಿಕೊಂಡಿದ್ದರು. 2015ರಲ್ಲಿ ಕೌಟುಂಬಿಕ ಹಾಗೂ ಆಸ್ತಿ ವಿಚಾರವಾಗಿ ಗಲಾಟೆ ನಡೆದಾಗ, ತಮ್ಮ ನಾದಿನಿ ಮತ್ತು ಆಕೆಯ ಪತಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದರು. ತಮಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಕೋರ್ಟ್ ನೀಡಿದ ತೀರ್ಪು:

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೃಷಾಲಿ ವಿ. ಜೋಶಿ ಅವರಿದ್ದ ಪೀಠವು, ಸುಪ್ರೀಂ ಕೋರ್ಟ್‌ನ ಈ ಹಿಂದಿನ ನಿರ್ದೇಶನಗಳನ್ನು ಉಲ್ಲೇಖಿಸಿ, ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಅದನ್ನು ಪಾಲಿಸುತ್ತಿರುವಾಗ ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳು ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಆರೋಪಿಗಳನ್ನು ಅಟ್ರಾಸಿಟಿ ಕಾಯ್ದೆಯ ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಆದರೆ, ಹಲ್ಲೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ (IPC) ಅಡಿಯ ಇತರ ಅಪರಾಧಗಳಿಗಾಗಿ ಆರೋಪಿಗಳು ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *