Home ದಾವಣಗೆರೆ ರಾಮಮಂದಿರ ಕಾಣಿಕೆ ದುರುಪಯೋಗ ಭಕ್ತರಿಗೆ ಮಾಡಿದ ದ್ರೋಹ: ಯೋಗಿ ಆದಿತ್ಯನಾಥ ರಾಜೀನಾಮೆಗೆ ಸೈಯದ್ ಖಾಲಿದ್ ಅಹ್ಮದ್ ಆಗ್ರಹ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ರಾಮಮಂದಿರ ಕಾಣಿಕೆ ದುರುಪಯೋಗ ಭಕ್ತರಿಗೆ ಮಾಡಿದ ದ್ರೋಹ: ಯೋಗಿ ಆದಿತ್ಯನಾಥ ರಾಜೀನಾಮೆಗೆ ಸೈಯದ್ ಖಾಲಿದ್ ಅಹ್ಮದ್ ಆಗ್ರಹ

Share
ರಾಮಮಂದಿರ
Share

ದಾವಣಗೆರೆ: ಅಯೋಧ್ಯೆಯ ರಾಮಮಂದಿರದ ಕಾಣಿಕೆ ಪೆಟ್ಟಿಗೆಯಿಂದ ಭಾರೀ ಹಣ ದುರುಪಯೋಗ ಪಡಿಸಿಕೊಂಡಿರುವುದು ಭಕ್ತರ ನಂಬಿಕೆ ಮತ್ತು ದೈವ ಭಕ್ತಿಗೆ ಮಾಡಿದ ದ್ರೋಹ. ಭಾರತದ ಜನತೆ ಈ ಕಳ್ಳತನ ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಉತ್ತರ ಪ್ರದೇಶ ಬಿಜೆಪಿ ಸರ್ಕಾರಕ್ಕೆ ಧರ್ಮವೂ ಇಲ್ಲ, ನಾಚಿಕೆಯೂ ಇಲ್ಲ. ಯೋಗಿ ಆದಿತ್ಯನಾಥ ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಮ ಮಂದಿರದ ಕಾಣಿಕೆ ಪೆಟ್ಟಿಗೆಯಿಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಎಂಟು ಜನರನ್ನು ಬಂಧಿಸಿರುವುದು ದೇಶಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಅಯೋಧ್ಯೆಯಲ್ಲಿ ಇಂತಹ ದೊಡ್ಡ ದರೋಡೆ ನಡೆದಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಎಸ್‌ಐಟಿ ವರದಿಯ ಪ್ರಕಾರ, ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಕೋಟ್ಯಂತರ ರೂಪಾಯಿ ಕಾಣಿಕೆ ಹಣವನ್ನು ಲೂಟಿ ಮಾಡಲಾಗಿದೆ. ಬಿಜೆಪಿಯವರದ್ದು ಇದೇ ಹಿಂದುತ್ವನಾ? ಎಂದು ಪ್ರಶ್ನಿಸಿದ್ದಾರೆ.

ಅಯೋಧ್ಯೆಗೆ ಪದೇ ಪದೇ ಭೇಟಿ ನೀಡಿ ವಿಶ್ವ ದಾಖಲೆ ಬರೆಯಲು ಯತ್ನಿಸುವ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ದೊಡ್ಡದಾಗಿ ಮಾತನಾಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ, ಮಂದಿರದಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಲೂಟಿ ನಡೆಯುತ್ತಿದ್ದರೂ ಅದನ್ನು ಪತ್ತೆಹಚ್ಚುವ ವ್ಯವಸ್ಥೆ ಮಾಡಲು ಯಾಕೆ ಸಾಧ್ಯವಾಗಲಿಲ್ಲ?” ಎಂದಿದ್ದಾರೆ.

ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಿನಾಕಾರಣ ಆರೋಪ ಮಾಡಿದ್ದ ಬಿಜೆಪಿಗರು ಇಷ್ಟೊಂದು ಪ್ರಮಾಣದ ಭ್ರಷ್ಟಾಚಾರ ನಡೆದಿದ್ದರೂ ಯಾಕೆ ಸುಮ್ಮನಿದ್ದಾರೆ. ಬೀದಿಗಿಳಿದು ಯಾಕೆ ಪ್ರತಿಭಟಿಸುತ್ತಿಲ್ಲ. ರಾಮಮಂದಿರದ ಬಗ್ಗೆಮಾತನಾಡುತ್ತಿದ್ದ ಬಿಜೆಪಿಗರು ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಸಮಾಜದಲ್ಲಿ ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಬಿಜೆಪಿಗರು ರಾಮಮಂದಿರ ದೇಗುಲದಲ್ಲಿ ಕದ್ದವರಿಗೆ ಶಿಕ್ಷೆಯಾಗುವವರೆಗೆ ಹೋರಾಟ ಮಾಡಲಿ. ಇಂಥ ಭ್ರಷ್ಟಾಚಾರ ನಡೆದಿದ್ದರೂ ಉತ್ತರ ಪ್ರದೇಶ ಸರ್ಕಾರಕ್ಕೆ ಯಾಕೆ ಮಾಹಿತಿ ಸಿಕ್ಕಿಲ್ಲ. ಇದು ದೇಶದ ಕೋಟ್ಯಂತರ ಭಕ್ತರಿಗೆ ಮಾಡಿರುವ ಅಪಮಾನ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *